ರಾಮನಗರ,04.ಫೆಬ್ರವರಿ.25: ರಾಜ್ಯ ರಾಜಕೀಯದಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಕೈ ನಾಯಕರ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕುವಂತೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಕಾಂಗ್ರೆಸ್ ವರಿಷ್ಠರ ಹೇಳಿಕೆಗೂ ಕ್ಯಾರೆ ಎನ್ನದೆ ಮತ್ತೆ ಕಾಂಗ್ರೆಸ್ ಶಾಸಕರು ಬಹಿರಂಗವಾಗಿ ಮುಖ್ಯಮಂತ್ರಿವಾಗಿ ಹೇಳಿಕೆ ನೀಡುತ್ತಿದ್ದಾರೆ.
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂಬ ಹೇಳಿಕೆ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.
ಕೃತಜ್ಞತಾ ಸಮಾವೇಶದಲ್ಲಿ ಡಿಕೆಶಿ ಮುಂದಿನ ಸಿಎಂ ಎಂಬ ಹೇಳಿಕೆ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಹೇಳಿರೋದು ಚನ್ನಪಟ್ಟಣದ ಗೆಲುವಿನ ಬಗ್ಗೆ. ಚನ್ನಪಟ್ಟಣದಲ್ಲಿ ಜನ ನಮ್ಮ ಗೌರವ ಉಳಿಸಿದ್ದಾರೆ.
ಅವರು ಕೊಟ್ಟಿರೋ ಶಕ್ತಿ ಡಿಕೆಶಿಗೆ ಮುಂದೆ ಅಧಿಕಾರದ ಚುಕ್ಕಾಣಿ ಹಿಡಿಯಲು ಶಕ್ತಿ ತುಂಬುತ್ತೆ ಅಂತ, ನಾನು ನಾಳೆಗೆ ಡಿಕೆಶಿ ಸಿಎಂ ಆಗ್ತಾರೆ ಅಂದಿದ್ದೀನಾ.?, ನಾವೇನು ಯಾರ ಬೆಂಬಲಿಗರೂ ಅಲ್ಲ, ಹೈಕಮಾಂಡ್ ಬೆಂಬಲಿಗರು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಅವರವರ ನಾಯಕರು ಸಿಎಂ ಆಗಬೇಕು ಅನ್ನೋದು ಕಾರ್ಯಕರ್ತರ ಆಸೆ. ಪರಮೇಶ್ವರ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೋಳಿ ಅಭಿಮಾನಿಗಳಿಗೆ ಆಸೆ ಇದೆ. ಹಾಗೆಯೇ ಡಿಕೆ ಶಿವಕುಮಾರ್ ಅಭಿಮಾನಿಗಳಿಗೂ ಅವರು ಸಿಎಂ ಆಗಬೇಕು ಅನ್ನುವ ಆಸೆ ಇದೆ.
ನಮ್ಮ ನಾಯಕರು ಮುಖ್ಯಮಂತ್ರಿ ಆಗಬೇಕು ಅಂತ ಕೇಳೋದ್ರಲ್ಲಿ ತಪ್ಪೇನಿದೆ. ಜನ ಮಾಜಿ ಸಿಎಂ ಪುತ್ರನ ಎದುರು ಒಬ್ಬ ಯೋಗೇಶ್ವರ್ ಗೆಲ್ಲಿಸಿದ್ದಾರೆ, ಇದರಿಂದ ಪಕ್ಷಕ್ಕೆ ಹಾಗೂ ನಮಗೆ ಗೌರವ ಸಿಕ್ಕಿದೆ. ಇದಕ್ಕೆ ಶ್ರಮ ಹಾಕಿದ ಡಿ ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಸಿಗುತ್ತೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…