ಕೊಪ್ಪಳ.18.ಜುಲೈ.25:- ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಜುಲೈ 19 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಸರ್ಕಾರದ ಆದೇಶದನ್ವಯ ಹಾಗೂ ಮೇಲಾಧಿಕಾರಿಗಳ ನಿರ್ದೇಶನದನ್ವಯ ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ಪ್ರತಿ ತಿಂಗಳಿನ 3ನೇ ಶನಿವಾರದಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಂತೆ ಜು. 19ಕ್ಕೆ ಮುನಿರಾಬಾದ್ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿಗಳಾದ ಮುನಿರಾಬಾದ್ ಗಾ.ಪಂ., ಹುಲಿಗಿ, ಹಿಟ್ನಾಳ, ಅಗಳಕೇರಾ, ಶಿವಪುರ, ಗಿಣಿಗೇರಾ, ಹಿರೇಬಗನಾಳ, ಕುಣಿಕೇರಾ, ಕಲ್‌ತಾವರಗೇರಾ, ಬಂಡಿಹರ್ಲಾಪುರ, ಬೂದುಗುಂಪಾ, ಗುಳದಳ್ಳಿ, ಬೇವಿನಹಳ್ಳಿ, ಇಂದರಗಿ, ಹೊಸಳ್ಳಿ ಗ್ರಾಮ ಪಂಚಾಯತಿಗಳ ಎಲ್ಲಾ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಜೆಸ್ಕಾಂ ಮುನಿರಾಬಾದ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…