ಕಲಬುರಗಿ.03.ಜೂನ್.25:- ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್‌ಐಆರ್ ಕಲಬುರಗಿಯಲ್ಲಿ ಪೊಲೀಸರನ್ನು 15-20 ನಿಮಿಷ ತಡೆ ಹಿಡಿದರೆ, ಮುಸ್ಲಿಮರನ್ನು ನಮ್ಮ ಬೋರಮಾಠಿ ಸಮುದಾಯದಿಂದ ಸಾಮೂಹಿಕವಾಗಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು. 8 ದಿವಸಗಳ ಒಳಗಾಗಿ ʼಲವ್ ಜಿಹಾದ್ʼ ಆರೋಪಿಗಳನ್ನು ಸಾಯಿಸಬೇಕು ಎಂದು ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಶನಿವಾರ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಣಿಕಂಠ ರಾಠೋಡ್ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
ಮೊದಲ ಎಫ್‌ಐಆರ್ ನಂತರ ಈಗ ಶಹಾಬಾದ್ ಪೊಲೀಸ್ ಠಾಣೆಯಯಲ್ಲಿ ರವಿವಾರ ಮತ್ತೊಂದು ಪ್ರಕರಣ ದಾಖಲಾಗಿದೆ.
ಶಹಾಬಾದ್ ನಿವಾಸಿ ಮುಹಮ್ಮದ್ ಮಸ್ತಾನ್ ದೂರು ನೀಡಿದ ಮೇರೆಗೆ, ಕೋಮು ಸೌಹಾರ್ದತೆ ಕೆಡಿಸಲು ಪ್ರಯತ್ನಿಸಿದ್ದು, ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಶಹಾಬಾದ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಕೋಮು ಗಲಭೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ಮಣಿಕಂಠ ರಾಠೋಡ್ ವಿರುದ್ಧ ಇದು ಎರಡನೇ ಪ್ರಕರಣ ದಾಖಲಾಗಿದ್ದು, ಈವರೆಗೆ ಪೊಲೀಸರು ಆತನನ್ನು ಬಂಧಿಸದಿರುವುದನ್ನು ಖಂಡಿಸಿ ಮುಸ್ಲಿಂ ಸಮುದಾಯದ ಮತ್ತು ಪ್ರಗತಿಪರ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದನೆ ಮಾಡಿರುವ ಆರೋಪದ ಮೇರೆಗೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…