ಬೀದರ.21.ಅಗಸ್ಟ್.25:- ಬೀದರ ಜಿಲ್ಲೆಯ 196 ಗ್ರಾಮಗಳ ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ ಕುಡಿಯುವ ನೀರು, ರಸ್ತೆ, ಇತರೆ ಮೂಲಭೂತ ಸೌಕರ್ಯಗಳು ಜನರಿಗೆ ಮುಟ್ಟುವಂತೆ ಜಿಲ್ಲಾ ಮಟ್ಟದ ಟ್ರೈನರ್ ರವರಿಂದ ತಾಲೂಕಾ ಮಟ್ಟದ ಟ್ರೈನರ್ ರವರು ತರಬೇತಿ ಪಡೆದು ಸದರಿಯವರು ಗ್ರಾಮಗಳ ಹಂತದಲ್ಲಿ ಗ್ರಾಮ ವರ್ಕಶಾಪ್‍ಗಳನ್ನು ನಡೆಸಿ ಪ್ರತಿಯೊಂದು ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳ ಕುರಿತು ಅರಿವು ಮೂಡಿಸಲು ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಅವರು ಇತ್ತೀಚಿಗೆ ಜಿಲ್ಲಾ ಮಟ್ಟದಲ್ಲಿ ಆದಿ ಕರ್ಮಯೋಗಿ ಅಭಿಯಾನ ಕುರಿತು ಬಿ.ಎಂ.ಟಿ. ತಾಲೂಕಾ ಮಟ್ಟದ ಮಾಸ್ಟರ್ ಟ್ರೈನರ್‍ಗಳಿಗೆ ಜಿಲ್ಲಾ ಸಂಪನ್ಮೂಲ ಕೇಂದ್ರ ಮೈಲೂರ ಬೀದರನಲ್ಲಿ ಆಯೋಜಿಸಲಾಗಿದ್ದ 3 ದಿನಗಳ (ಆ.20 ರಿಂದ ಆ.22 ರವರೆಗೆ) ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಮಾತನಾಡಿದರು.
ಈ ಕಾರ್ಯಗಾರದಲ್ಲಿ ಸಂಬಂಧಪಟ್ಟ ಏಳು ಇಲಾಖೆಯ ಅನುಷ್ಠಾನ ಅಧಿಕಾರಿಗಳು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ…
ರಿಲಾಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2025-26 ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನವು ರ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ,…
ಮುಂಬೈ.22.ಆಗಸ್ಟ್.25:- ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊವನ್ನು ನಿರ್ವಹಿಸುವ ಪ್ರಸಾರಕಕ್ಕೆ 45,791 ಅನುಮೋದಿತ ಸಿಬ್ಬಂದಿ ಬಲ ಇದೆ. ಭಾರತಿಯು ದೀರ್ಘಕಾಲದ…
ಬೆಂಗಳೂರು.22.ಆಗಸ್ಟ್.25:- ಪ್ರಸಕ್ತ 2025-26 ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ UPSC ಯುಪಿಎಸ್‍ಸಿ/ KPSC ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು…
ದಕ್ಷಿಣ ಕನ್ನಡ.22.ಆಗಸ್ಟ್ .25:- ಉಜಿರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ಟಣವಾಗಿದೆ. ಮಹಿಳೆಯರಿಂದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ…
2025-26ನೇ ಶೈಕ್ಷಣಿಕ ಸಾಲಿಗೆಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಕೆಳಕಂಡ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ…