ಬೀದರ 10.ಜನವರಿ.25,:- ಇಂದು ಬೀದರ ರೈಲ್ವೆ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಹುಮನಾಬಾದ ಮತ್ತು ಹಳ್ಳಿಖೇಡ (ಕೆ) ರೈಲು ನಿಲ್ದಾಣಗಳ ಮಧ್ಯ ಕೆಮ್ ನಂ. 49/7-8 ನೇದ್ದರಲ್ಲಿ ದಿನಾಂಕ: 22-12-2024 ರಂದು ಅಂದಾಜು 45 ವರ್ಷದ ಅಪರಿಚಿತ ವ್ಯಕ್ತಿಯ ಮೃತ ದೇಹವು ಕಂಡುಬಂದಿದ್ದು, ಈವರೆಗೆ ಮೃತನ ವಾರಸುದಾರರು ಯಾರು ಎಂಬುವುದಾಗಿ ಪತ್ತೆಯಾಗಿರುವುದಿಲ್ಲ ಎಂದು ಬೀದರ ರೈಲ್ವೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ ರೈಲು ನಿಲ್ದಾಣದ ಡಿವಾಯ್.ಎಸ್.ಎಸ್.ಎಸ್ಸಿ ರೈಲ್ವೆ ಬೀದರ ಅವರ ಲಿಖಿತ ಮಾಹಿತಿ ಮೇರೆಗೆ ಬೀದರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್.ನಂ. 34/2024 ಕಲಂ 194 ಬಿಎನ್ಎಸ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದ್ದು, ಮೃತ ವ್ಯಕ್ತಿಯು ಅಂದಾಜು 5 ಅಡಿ 6 ಇಂಚ್ ಎತ್ತ ಇದ್ದು, ಅಗಲವಾದ ಹಣೆ, ಸಧೃಡ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ ಕಪ್ಪು ಉದ್ದನೆಯ ಕೂದಲು, ಮುಖದ ಮೇಲೆ ಉದ್ದನೆಯ ಗಡ್ಡ ಮತ್ತು ಮೀಸೆ ಇದ್ದು, ಮೈಮೇಲೆ ಒಂದು ಕಪ್ಪು ಬಣ್ಣದ ಜಾಕೇಟ್, ಒಂದು ಕಪ್ಪು ಬಣ್ಣದ ಪ್ಯಾಂಟ್, ಒಂದು ಕಂದು ಬಣ್ಣದ ಅಂಡರವೇರ, ಬೂದು ಬಣ್ಣದ ರೌಡ್ ನೇಕ್ ಟಿ-ಶರ್ಟ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಬೀದರ ರೈಲ್ವೆ ನಿಲ್ದಾಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಿಗೆ ಮತ್ತು ದೂರವಾಣಿ ಸಂಖ್ಯೆ: 08482-226389, ಮೊಬೈಲ್ ಸಂಖ್ಯೆ: 9480802133, 7483095508 ಗೆ ಸಂಪರ್ಕಿಸಲು ಕೋರಿದೆ.
Source: www.prajaprabhat.com
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…