02/08/2025 12:05 PM

Translate Language

Home » ಲೈವ್ ನ್ಯೂಸ್ » ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಕ್ಕಾಗಿ: ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಕ್ಕಾಗಿ: ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.31.ಜುಲೈ.25: 2025-26ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್

https://ssp.postmatric.karnataka.gov.in ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್  https://bcwd.karnataka.gov.in ಗೆ ಭೇಟಿ ನೀಡಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ 8050770005, ಇ-ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಮತ್ತು ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!