ಕೊಪ್ಪಳ.31.ಜುಲೈ.25: 2025-26ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್
https://ssp.postmatric.karnataka.gov.in ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ 8050770005, ಇ-ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಮತ್ತು ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…