ಬೀದರ.27.ಡಿಸೆಂಬರ್.25: ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ ನಂತರದ ಅರ್ಹತಾ ವಿದ್ಯಾರ್ಥಿ ವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ”ಸೌಲಭ್ಯಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 31-01-2026 ರವರೆಗೆ ವಿಸ್ತರಿಸಲಾಗಿದೆ ಎಂದು ಬೀದರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ದಿನಾಂಕ: 31-01-2026 ರೊಳಗಾಗಿ ಅನ್‍ಲೈನ್ ಮೂಲಕ www.ssp.postmatric.karnataka.gov.in ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005 ಇಮೇಲೆ bcwdhelpline@gmail.com ಗೆ, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmetrichelp@karnataka.gov.in ದೂರವಾಣಿ ಸಂಖ್ಯೆ: 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.






Any questions related to ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ಇತರೇ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ?