ಕೊಪ್ಪಳ.13.ಜೂನ್.26: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2026-27ನೇ ಸಾಲಿನ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು, ಪಿಯುಸಿ, ಸಮನಾಂತರ ಡಿಪ್ಲೋಮಾ ಮತ್ತು ಐಟಿಐ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವರ್ಗ-1, ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ.ಗಳಾಗಿದ್ದು, ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 1 ಲಕ್ಷ ರೂ.ಗಳಾಗಿದೆ. ವಿದ್ಯಾರ್ಥಿಗಳು ಜೂನ್ 15 ರೊಳಗೆ ಇಲಾಖೆಯ ಅಧಿಕೃತ ತಂತ್ರಾಂಶ https://shp.karnataka.gov.in/bcwd ದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ಮಾಹಿತಿ, ಪ್ರವೇಶ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಸರ್ಕಾರದ ಆದೇಶಗಳ ವಿವರಗಳನ್ನು ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಇಲಾಖೆಯ ಇ-ಮೇಲ್ bcwdhelpline@gmail.com ಹಾಗೂ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Any questions related to ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ?