ಬೀದರ.21.ಮೇ.25:- ಬೀದರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ,ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ. 1.00 ಲಕ್ಷ ಇದ್ದಿರುತ್ತದೆ. ವಿದ್ಯಾರ್ಥಿಗಳು ವೆಬ್‌ಸೈಟ್ https://shp.karnataka.gov.in/bcwd ಮೂಲಕ ದಿನಾಂಕ: 20-06-2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ತಾಲ್ಲೂಕಾವಾರು ವಿದ್ಯಾರ್ಥಿನಿಲಯಗಳ ವಿವರಗಳಿಗೆ ವೆಬ್‌ಸೈಟ್ https://bcwd.karnataka.gov.in ಹಾಗೂ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವೆಬ್‌ಸೈಟ್ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೀದರ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…