ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್ https://ssp.karnataka.gov.in ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.1 ಲಕ್ಷ ಮೀರಿರಬಾರದು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. 2024-25ನೇ ಸಾಲಿನಲ್ಲಿ ಅನುಮೋದನೆಗೊಂಡ ಅರ್ಜಿಗಳು ಹಾಗೂ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು Auto Renewal ಎಂದು ಪರಿಗಣಿಸಲಾಗುವುದು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರುವ (NPCI MAPPING ACTIVE) ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.
ಶುಲ್ಕ ಮರುಪಾವತಿಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗ ಸೂಚಿಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in ಅನ್ನು ವೀಕ್ಷಿಸಬಹುದು ಹಾಗೂ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 08539-225070, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ,
ಕುಷ್ಟಗಿ: 8861610578, ಗಂಗಾವತಿ: 9986244408, ಯಲಬುರ್ಗಾ: 8095191406 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅಜ್ಮೀರ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಜುಲೈ.25:- ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿ ಶಾಲಾವಧಿಯಲ್ಲಿ ಅಕ್ರಮವಾಗಿ ವಿದ್ಯಾರ್ಥಿಗಳ ಪೋಷಕರಿಂದ ಹಣ ಪೀಕುತ್ತಿರುವ 'ಕೋಚಿಂಗ್' ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ…
ಬೆಂಗಳೂರು.04.ಜುಲೈ.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ…
DWCD Yadgiri Recruitment 2025 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ…
ಬೆಂಗಳೂರು.04.ಜುಲೈ.25:-<ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದ ಹೊರತು ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಹೊರಡಿಸಲಾಗಿರುವ ಉದ್ದೇಶಿತ ಕರಡು ಅಧಿಸೂಚನೆ ಅನ್ವಯ ಭವಿಷ್ಯದಲ್ಲಿ…
ದೇಶದಲ್ಲಿ ಹಲವಾರು ಪಾಕಿಸ್ತಾನಿ ನಟರು ಮತ್ತು ಕ್ರಿಕೆಟಿಗರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸರ್ಕಾರ ಮತ್ತೆ ನಿಷೇಧಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಈ…
ಮೊದಲ ಖೇಲೋ ಇಂಡಿಯಾ ಜಲ ಕ್ರೀಡಾ ಉತ್ಸವವು ಆಗಸ್ಟ್ 21 ರಿಂದ ಶ್ರೀನಗರದ ಐತಿಹಾಸಿಕ ದಾಲ್ ಸರೋವರದಲ್ಲಿ ನಡೆಯಲಿದೆ. ಇದನ್ನು…