ದಲಿತ ಯುವಕನ ಮೇಲ್ಜಾತಿಯ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ,ಯುವಕ ಮೃತ್ಯು.!

ಬೀದರ.08.ಜನೆವರಿ.25 ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ನಿವಾಸಿಯಾದ ಸುಮಿತ ಮತ್ತು ಔರಾದ ತಾಲೂಕಿನ ರಕ್ಷಾಳ ಗ್ರಾಮದ ಮೇಲ್ಜಾತಿ ಬಾಲಕಿಯನ್ನು ಪ್ರೀತಿ ಮಾಡಿದ್ದಕ್ಕಾಗಿ ದಲಿತ ಯುವಕನಿಗೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನಪ್ಪಿದ ಘಟನೆ ಕಮಲನಗರ ತಾಲ್ಲೂಕಿನ ಠಾಣಾ ಕುಶನೂರ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬೇಡಕುಂದಾ ಗ್ರಾಮದ ನಿವಾಸಿ ಸುಮಿತ್ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ

ರಕ್ಷಾಳ್ ಗ್ರಾಮದ ಬಾಲಕಿಯನ್ನು ಸುಮಿತ್ ಪ್ರೀತಿಸುತಿದ್ದ. ರವಿವಾರದಂದು ನಮ್ಮ ಮನೆ ಕಡೆಗೆ ಬಾ ಎಂದು ಸುಮಿತ್ ನನ್ನು ಹುಡುಗಿ ಕರೆದಿದ್ದಳು. ಹುಡುಗಿಯನ್ನು ಭೇಟಿ ಮಾಡಲು ಹೋದ ಸುಮಿತ್ ನನ್ನು, ಹುಡುಗಿಯ ಅಪ್ಪ, ಅಣ್ಣ ಮತ್ತು ಸಂಬಂಧಿಕರು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು.

ಸುಮಿತ್ ಮನೆಯಿಂದ ಹೊರಗಡೆ ಹೋದ ನಂತರ ಬಾಲಕಿಯ ಅಣ್ಣ ಮತ್ತು ಆತನ ಗೆಳೆಯರು ಸೇರಿಕೊಂಡು ಮತ್ತೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಸುಮಿತ್ ನ ಮನೆಗೆ ಕರೆ ಮಾಡಿ ಆತನನ್ನು ಕರೆದೋಯ್ಯಲು ಹೇಳಿದ್ದಾರೆ ಎಂದು ಮೃತ ಯುವಕನ ಸಂಬಂಧಿಕರು ತಿಳಿಸಿದ್ದಾರೆ.

ಸುಮಿತ್ ನ ತಂದೆ ಹಾಗೂ ಸಹೋದರರು ಘಟನೆ ನಡೆದ ಸ್ಥಳಕ್ಕೆ ಬಂದು, ಸುಮಿತ್ ನನ್ನು ತಕ್ಷಣವೇ ಠಾಣಾ ಕುಶನೂರ್ ಸರಕಾರಿ ಆಸ್ಪತ್ರೆಗೆ ಕರೆದೋಯ್ದಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮಹಾರಾಷ್ಟ್ರದ ಉದಗೀರ್ ಲಾತೂರ್ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆ ನೀಡಿದ್ದಾರೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಮಿತ್ ಮೃತಪಟ್ಟಿದ್ದಾನೆ. ಇಂದು ಬೀದರ್ ಆಸ್ಪತ್ರೆಗೆ ಮೃತದೇಹ ತಂದಿದ್ದೇವೆ ಎಂದು ಮೃತ ಯುವಕನ ಸಂಬಂಧಿಕರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕಮಲನಗರ ತಾಲೂಕಿನ ಠಾಣಾ ಕುಶನೂರ. ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

8 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

8 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

8 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

8 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

8 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago