|

ಮೇವು ಕತ್ತರಿಸುವ ಯಂತ್ರಗಳ ವಿತರಣೆ: ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ.09.ಅಕ್ಟೋಬರ.25: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಮೇವು ಕತ್ತರಿಸುವ ಯಂತ್ರ  (2 H.P Electric Motor Chaff Cutter)     ಗಳನ್ನು ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಅರ್ಜಿದಾರರು ಫ್ರೂಟ್ಸ್ ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

ಕಡ್ಡಾಯವಾಗಿ ಕನಿಷ್ಟ 2 ಜಾನುವಾರುಗಳನ್ನು ಹೊಂದಿರತಕ್ಕದ್ದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್‌ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು.

ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು. ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3, ಅಲ್ಪಸಂಖ್ಯಾತರಿಗೆ ಶೇ.15 ಮತ್ತು ವಿಶೇಷ ಚೇತನರಿಗೆ ಶೇ.5 ಆದ್ಯತೆ ನೀಡಲಾಗುವುದು.

Similar Posts

Leave a Reply

Your email address will not be published. Required fields are marked *