ಮೇ.31 ರಂದು ಖಾನಾಪುರ ಜಂಕ್ಷನ್‍ನಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ


ಬೀದರ.29. ಮೇ.25:- ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೇ.31 (ಶನಿವಾರ) ಖಾನಾಪುರ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಹಾಗೂ ಲೆವೆಲ್ ಕ್ರಾಸಿಂಗ್ ಸಂಖ್ಯೆ 71 ರ ಬದಲಿಗೆ ರಸ್ತೆ ಕೆಳ ಸೇತುವೆ (RUB) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆಂದು ದಕ್ಷಿಣ ಮಧ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಖಾನಾಪುರದಲ್ಲಿ ಸರಕು ಸಾಗಣೆ ಶೆಡ್ ನಿರ್ಮಾಣ ಯೋಜನೆ: ವಿಕಾರಾಬಾದ್ – ಬೀದರ್ – ಪಾರ್ಲಿ ರೈಲು ಮಾರ್ಗದಲ್ಲಿರುವ ಖಾನಾಪುರ ಜಂಕ್ಷನ್ ನಿಲ್ದಾಣವು, ಕಲಬುರಗಿ, ಬೀದರ್ ಮತ್ತು ಭಾಲ್ಕಿ ರೈಲ್ವೆ ನಿಲ್ದಾಣಗಳನ್ನು ಸಂಪರ್ಕಿಸುವ ಪ್ರಮುಖ ಕೇಂದ್ರೀಯ ನಿಲ್ದಾಣವಾಗಿದೆ. ಈ ನಿಲ್ದಾಣವು ಜಂಕ್ಷನ್‍ನಾಗಿ ಇರುವ ಕಾರಣ, ಸರಕು ರೈಲುಗಳ ಚಲನೆಗೆ ಅನುಕೂಲಕರವಾಗಿದೆ.

ಇಂತಹ ಪ್ರಾಮುಖ್ಯತೆಯ ಹಿನ್ನೆಲೆಯಲ್ಲಿ, ಖಾನಾಪುರದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಹೊಸ ಸರಕು ಸಾಗಣೆ ಶೆಡ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಕಾಮಗಾರಿ ಜೂನ್ 2026 ರೊಳಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ.


ಲೆವೆಲ್ ಕ್ರಾಸಿಂಗ್ ಸಂಖ್ಯೆ 71 ಬದಲಿಗೆ ರಸ್ತೆ ಕೆಳ ಸೇತುವೆ (RUB) ನಿರ್ಮಾಣ: ಸಿಕಂದರಾಬಾದ್ ವಿಭಾಗದ ವಿಕಾರಾಬಾದ್ – ಪಾರ್ಲಿ ವೈಜನಾಥ್ ಮಾರ್ಗದಲ್ಲಿರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 71, ಭಾಲ್ಕಿ ನಿಲ್ದಾಣದ ಬಳಿ ಇದ್ದು, ಭಾಲ್ಕಿ ಮತ್ತು ಬೀದರ್ ಪಟ್ಟಣಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗದಲ್ಲಿದೆ.

ಈ ಮಾರ್ಗದ ವಾಹನ ಸಂಚಾರ ದಟ್ಟವಾಗಿದ್ದು, ಲೆವೆಲ್ ಕ್ರಾಸಿಂಗ್ ಗೇಟ್ ನಿಂದ ಆಗುವ ತಡೆಗಳನ್ನು ನಿವಾರಿಸಲು 10.85 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕೆಳ ಸೇತುವೆ (RUB ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಈ ಸೇತುವೆ ನಿರ್ಮಾಣದಿಂದ ಭಾಲ್ಕಿ ಮತ್ತು ಬೀದರ್ ನಡುವಿನ ವಾಹನ ಸಂಚಾರ ಸುಗಮವಾಗಲಿದ್ದು, ರಸ್ತೆ ಹಾಗೂ ರೈಲು ಪ್ರಯಾಣಿಕರ ಸುರಕ್ಷತೆ ಹೆಚ್ಚಳವಾಗುತ್ತದೆ. ಜೊತೆಗೆ, ಪ್ರಯಾಣದ ಸಮಯವೂ ಕಡಿಮೆಯಾಗಲಿದೆ.


ಈ ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

3 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

3 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

4 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

4 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago