ಮೇ.4 ರಂದು ನೀಟ್ (ಯುಜಿ) ಪರೀಕ್ಷೆ ನಿಗಧಿ:ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.

ಬೀದರ.02.ಏಪ್ರಿಲ್.25:- ವೈದ್ಯಕೀಯ, ದಂತವೈದ್ಯಕೀಯ ಕೋರ್ಸುಗಳಿಗೆ ಹೋಗಬಯಸುವವರಿಗೆ ನೀಟ್ (ಯುಜಿ) ಪರೀಕ್ಷೆ ಮೇ.4 ರಂದು ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ನಡೆಯುವ ನೀಟ್ (ಯುಜಿ) ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ (ಯುಜಿ) ಪರಿಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಬೀದರ ಜಿಲ್ಲೆಯಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7653 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಆಯೋಜಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ನಿμÉೀಧಾಜ್ಞೆ ಜಾರಿಗೊಳಿಸಲಾಗುವುದು ಹಾಗೂ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್, ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಇಡುವುದು ಮತ್ತು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪತ್ರಿಕೆ ಮತ್ತು ಮಾಧ್ಯಮಗಳ ಪ್ರವೇಶ ನಿಬರ್ಂಧಿಸಲಾಗುವುದು.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷಾ ಕೊಠಡಿ ಸ್ವಚ್ಛತೆಯಿಂದ ಇರಿಸುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಕೆಎಸ್‍ಆರ್‍ಟಿಸಿ ಕಡೆಯಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.


ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಡಿ.ವಾಯ್.ಎಸ್.ಪಿ. ಶಿವನಗೊಡ ಪಾಟೀಲ್, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ ಶಹಾಬಾದಕರ್, ನೀಟ್ ಸಿಟಿ ಸಂಯೋಜಕರಾದ ಮಂಜುನಾಥ ಮಠಪತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

1 hour ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

8 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

11 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

11 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

11 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

18 hours ago