ಬೀದರ.29.ಏಪ್ರಿಲ್.25:- ಬೀದರ್ ಜಿಲೆದ್ಯಂತ್ ವೈದ್ಯಕೀಯ, ದಂತವೈದ್ಯಕೀಯ ಕೋರ್ಸುಗಳಿಗೆ ಹೋಗಬಯಸುವವರಿಗೆ ನೀಟ್ (ಯುಜಿ) ಪರೀಕ್ಷೆ ಮೇ.4 ರಂದು ನಿಗದಿಪಡಿಸಲಾಗಿದ್ದು, ಜಿಲ್ಲೆಯಲ್ಲಿ ನಡೆಯುವ ನೀಟ್ (ಯುಜಿ) ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ನಡೆಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ (ಯುಜಿ) ಪರಿಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ ಒಟ್ಟು 24 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 7653 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಆಯೋಜಿಸಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ನಿμÉೀಧಾಜ್ಞೆ ಜಾರಿಗೊಳಿಸಲಾಗುವುದು ಹಾಗೂ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್, ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಇಡುವುದು ಮತ್ತು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪತ್ರಿಕೆ ಮತ್ತು ಮಾಧ್ಯಮಗಳ ಪ್ರವೇಶ ನಿಬರ್ಂಧಿಸಲಾಗುವುದು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಪರೀಕ್ಷಾ ಕೊಠಡಿ ಸ್ವಚ್ಛತೆಯಿಂದ ಇರಿಸುವುದು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಕೆಎಸ್‍ಆರ್‍ಟಿಸಿ ಕಡೆಯಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಡಿ.ವಾಯ್.ಎಸ್.ಪಿ. ಶಿವನಗೊಡ ಪಾಟೀಲ್, ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ ಶಹಾಬಾದಕರ್, ನೀಟ್ ಸಿಟಿ ಸಂಯೋಜಕರಾದ ಮಂಜುನಾಥ ಮಠಪತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…