ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು; ಕಿರುಕುಳ ಕೊಟ್ರೆ,ಎಫ್ಐಆರ

ಬೆಂಗಳೂರು: 25.ಜನವರಿ.25:- ರಾಜ್ಯದಲ್ಲಿ ಮೈಕ್ರೋ ಕಿರುಕುಳ/ತೊಂದರೆ ಕೊಡುತ್ತಿರುವ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೊಸಾ ನಿಯಮ ರಚನೆ ಮಾಡಿದಾರೆ.

ಫೈನಾನ್ಸ್ ಕಿರುಕುಳದಿಂದ ಜನ ಬೇಸತ್ತು ಹೋಗಿದ್ದಾರೆ. ಇದನ್ನ ತಪ್ಪಿಸಲು ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ. ಅದರ ಭಾಗವಾಗಿ ಇಂದು ನಡೆದ ಸಭೆಯಲ್ಲಿ ಹಲವು ತೀರ್ಮಾನಗಳನ್ನ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ರು, ಏನೆಲ್ಲಾ ಚರ್ಚೆ ಆಯ್ತು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದಾರೆ.

ಈ ತರಹ ಯಾವುದೇ ಅವಾಚ್ಯ ಶಬ್ಧಗಳಿಂದ ಬಾಯ್ತದ್ರು ಈ ರೀತಿ ಮಾತಾಡಿದ್ರೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಹೇಳಿದಾರೆ

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು.

👉 ಸಾಲಗಾರರಿಗೆ ಬತ್ತಡ್ ಮಾಡುವಂತಿಲ್ಲ.
👉ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

👉ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?

👉ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?

👉ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

👉RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

👉ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು

👉ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

👉ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?: ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ.

👉ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ: ಕಂಪನಿಗಳಿಗೆ ಕೇಳಿದ ಸಿಎಂ*

👉ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಮೈಕ್ರೋ ಕಂಪನಿಯವರು ಉತ್ತರಿಸಿದ್ದಾರೆ.

👉ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ, ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ತಿಳಿಸಿದ್ದಾರೆ.

ಇದೆ ವೇಳೆ ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

5 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

14 hours ago