ಬೀದರ.23.ಜುಲೈ.25:- ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು (Entrepreneurship) ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು 5 ಲಕ್ಷವರೆಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಈದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ ಜಿಲ್ಲೆಗೆ ಪರಿಶಿಷ್ಟ ಜಾತಿಗೆ 06 ಅಭ್ಯರ್ಥಿಗಳ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಅಭ್ಯರ್ಥಿಗಳ ಗುರಿಯನ್ನು ನೀಡಲಾಗಿರುತ್ತದೆ. ಪರಿಶಿಷ್ಟ ಜಾತಿಗೆ 03 ಮತ್ತು ಪರಿಶಿಷ್ಟ ಪಂಗಡದ 03 ಅಭ್ಯರ್ಥಿಗಳ ಗುರಿಯನ್ನು ಸಾಧಿಸಲಾಗಿರುತ್ತದೆ.
ಪ್ರಯುಕ್ತ ಬೀದರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ 03 ಮತ್ತು ಪರಿಶಿಷ್ಟ ಪಂಗಡಕ್ಕೆ 01 ಗುರಿಗoಳು ಬಾಕಿ ಉಳಿದಿರುತ್ತವೆ. ವಿದ್ಯಾರ್ಹತೆ ಎಸ್‍ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು.
ನಿಗಧಿಪಡಿಸಿದ ಅರ್ಜಿಗನ್ನು ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದ್ವಿ ಪ್ರತಿಯಲ್ಲಿ ಎಲ್ಲಾ ಅಗತ್ಯ ಪ್ರಮಾಣ ಪತ್ರಗಳ ಸ್ವಯಂ ದೃಢೀಕೃತ ಪತ್ರಗಳೊಂದಿಗೆ 2025ನೇ ಜುಲೈ.30 ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಸಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಭವನ ಚಿಕ್ಕಪೇಟ ಬೀದರಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಬೀದರಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.