ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಬೀದರ್‌ನ ಹ್ಯೂಮ್ಯಾನಿಟಿ ಫಸ್ಟ್ ಫೌಂಡೇಷನ್ ಅಧ್ಯಕ್ಷ ಮೊಹಮ್ಮದ್ ಮಾಜೀದ್ ಬಿಲಾಲ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು
ಮಾಜೀದ್ ಬಿಲಾಲ್‌ಗೆ ಕರ್ನಾಟಕ ಭೂಷಣ ಪ್ರಶಸ್ತಿ
ಬೀದರ್: ಇಲ್ಲಿಯ ಹ್ಯೂಮ್ಯಾನಿಟಿ ಫಸ್ಟ್ ಫೌಂಡೇಷನ್ ಅಧ್ಯಕ್ಷ ಮೊಹಮ್ಮದ್ ಮಾಜೀದ್ ಬಿಲಾಲ್ ಅವರಿಗೆ ಸಮಾಜ ಸೇವೆಗಾಗಿ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಕೊಡಲಾಗುವ ರಾಜ್ಯಮಟ್ಟದ ಕರ್ನಾಟಕ ಭೂಷಣ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ವಿಶ್ರಾಂತ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದರು.
ಡಾ. ಬಸವ ರಮಾನಂದ ಸ್ವಾಮೀಜಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮ ಚೌಧರಿ, ‘ಮುಖ್ಯಮಂತ್ರಿ’ ಚಂದ್ರು ಮತ್ತಿತರರು ಇದ್ದರು.