ಮೊಹರಂ ಹಬ್ಬದ ಆಚರಣೆ: ಜು.05 ರಿಂದ 07 ರವರೆಗೆ ಮದ್ಯ ಮಾರಾಟ ನಿಷೇಧ

ಕೊಪ್ಪಳ.05.ಜುಲೈ .25:- ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜುಲೈ 05 ರಿಂದ 07 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಮೊಹರಂ ಹಬ್ಬದ ಆಚರಣೆಯ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರನ್ವಯ ಜಿಲ್ಲೆಯಾದ್ಯಂತ ಜುಲೈ 05 ರ ಬೆಳಿಗ್ಗೆ 06 ಗಂಟೆಯಿAದ ಜು.07 ರ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರಲು ನಿರ್ಲಕ್ಷ್ಯ ತೋರಿಸಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ

prajaprabhat

Recent Posts

ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.05.ಜುಲೈ.25:- ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.) ಜನವಾಡಾ ಶಾಲೆಯಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಗಳಿಗೆ ಪ್ರವೇಶಕ್ಕೆ…

10 hours ago

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳo ಸ್ಥಾಪನೆಗೆ ಅರ್ಜಿ ಆಹ್ವಾನ

ಬೀದರ.05.ಜುಲೈ.25:- ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ…

11 hours ago

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಎರಡನೇ ದಿನದ ಪ್ರಗತಿ ಪರಿಶೀಲನೆ:<br>

ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಬಲತುಂಬಲು ಯೋಜನೆ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೀದರ.05.ಜುಲೈ.25:- ರಾಜ್ಯದಲ್ಲಿ 30 ರಿಂದ 40 ಲಕ್ಷ…

12 hours ago

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.05.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು…

13 hours ago

ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.05.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.…

13 hours ago

ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ<br>

ಕೊಪ್ಪಳ.05.ಜುಲೈ .25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ…

13 hours ago