“ಯಡ್ರಾಮಿಯಲ್ಲಿ” ಮಹಿಳಾ ಸರ್ಕಾರಿ ಪದವಿ ಕಾಲೇಜು ನಿರ್ಮಾಣ: ಶಾಸಕ ಡಾ.ಅಜಯಸಿಂಗ್ ಭರವಸೆ

ಕಲಬುರಾಗಿ.18.ಫೆ.25: ಕಲಬುರಗಿ ಜಿಲೆ ಜೇವರ್ಗಿ ತಾಲೂಕಿನ ಯಡ್ರಾಮಿಯೆಲ್ಲಿ ಮಹಿಳಾ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಗೆ ಜನಪ್ರಿಯ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಭರವಸೆ ನೀಡಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಸಂಯುಕ್ತಾಶ್ರಯದಲ್ಲಿ ಸೋಮವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮ  ಜಾರಿಗೆ ತಂದಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಅವಶ್ಯ ಹಾಗೂ ಹಕ್ಕು ಸಹ ಆಗಿದೆ. ಈಗ ಎಲ್ಲ ರಂಗಗಳಲ್ಲಿ ಹೆಣ್ಣು ಮಕ್ಕಳು ಇದ್ದಾರೆ.

ಅದಕ್ಕೆ ಶಿಕ್ಷಣವೇ ಕಾರಣ. ಶಿಕ್ಷಣದಿಂದ ಮಾತ್ರ ಹೆಣ್ಣು ಉನ್ನತ ಹುದ್ದೆ ಪಡೆಯಲು ಸಾಧ್ಯ. ಕಾರಣ ಹೆಣ್ಣು ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆದು ಸಮಾಜದಲ್ಲಿ ಮುಂದೆ ಬರಬೇಕು’ ಎಂದರು.

ಹೆಣ್ಣು ಮಕ್ಕಳ ಸುರಕ್ಷತೆ, ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮ  ಜಾರಿಗೆ ತಂದಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಅವಶ್ಯ ಹಾಗೂ ಹಕ್ಕು ಸಹ ಆಗಿದೆ. ಈಗ ಎಲ್ಲ ರಂಗಗಳಲ್ಲಿ ಹೆಣ್ಣು ಮಕ್ಕಳು ಇದ್ದಾರೆ.

ಅದಕ್ಕೆ ಶಿಕ್ಷಣವೇ ಕಾರಣ. ಶಿಕ್ಷಣದಿಂದ ಮಾತ್ರ ಹೆಣ್ಣು ಉನ್ನತ ಹುದ್ದೆ ಪಡೆಯಲು ಸಾಧ್ಯ. ಕಾರಣ ಹೆಣ್ಣು  ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ಪಡೆದು ಸಮಾಜದಲ್ಲಿ ಮುಂದೆ ಬರಬೇಕು’ ಎಂದರು.

ನಂತರ ಸುಕನ್ಯಾ ಸಮೃದ್ದಿ ಯೋಜನೆಯ ಪಾಸ್‌ಬುಕ್ ಹಾಗೂ ಅನುಕಂಪ ಆಧಾರದ ಮೇಲೆ ನೇಮಕಾತಿಗೊಂಡ ಅಂಗನವಾಡಿ ಕಾಯಕರ್ತೆಯರಿಗೆ ಆದೇಶ ಪತ್ರ ವಿತರಣೆ ಮಾಡಿದರು.


ಸಿಡಿಪಿಒ ಸಂಗನಗೌಡ ಪಾಟೀಲ ಮಾತನಾಡಿದರು. ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಶ್ವನಾಥ ಬಿರಾದಾರ, ತಾಲ್ಲೂಕು ಪಂಚಾಯಿತಿ ಇಒ  ರವಿಚಂದ್ರರೆಡ್ಡಿ, ಪಿಎಸ್ಐ ಗಜಾನಂದ ಬಿರಾದಾರ ಆಗಮಿಸಿದ್ದರು. ದೀಪಾರೆಡ್ಡಿ ನಿರೂಪಿಸಿದರು, ಗಾಯತ್ರಿ ಹದನೂರ ವಂದಿಸಿದರು.



ಇದಕ್ಕೂ ಮುನ್ನ ಪಟ್ಟಣದ ಬಸವೇಶ್ವರ ವೃತ್ತದಿಂದ ವಿವಿಧ ಬಡಾವಣೆಗಳ ಮೂಲಕ ಡಾ.ಅಂಬೇಡ್ಕರ್ ಭವನದವರೆಗೆ ಸುಕನ್ಯಾ ಸಮೃದ್ದಿ ಯೋಜನೆಯb ಜಾಗೃತಿಗಾಗಿ ಜಾಥಾ ಹಾಗೂ ಮಹಿಳೆಯರಿಂದ ಕುಂಭ ಕಳಸದ ಮೆರವಣಿಗೆ ನಡೆಸಲಾಯಿತು.

ಪ್ರಮುಖರಾದ ಶಿವಶರಣಪ್ಪ ಕೋಬಾಳ, ವಿಜಯಕುಮಾರ ಹಿರೇಮಠ, ರಿಯಾಜ್ ಪಟೇಲ, ರಾಜು ಮುತ್ತಕೋಡ, ಭೀಮರಾಯ‌ ನಗನೂರ ಸೇರಿದಂತೆ ನೂರಾರು ಜನ ಅಂಗನವಾಡಿ ಮೇಲ್ವಿಚಾರಕರು, ಸಹಾಯಕರು, ಮಕ್ಕಳು ಭಾಗವಹಿಸಿದ್ದರು.

ಯಡ್ರಾಮಿ ಗ್ರಾಮೀಣಭಾಗದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ ಮಾಡಿದ್ರೆ ಮಹಿಳಾ ಮತ್ತಷ್ಟು ಸಬಲೀಕರಣ ಆಗ್ಬಹುದು.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

2 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

7 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

11 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

17 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

17 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

18 hours ago