04/08/2025 9:16 AM

Translate Language

Home » ಲೈವ್ ನ್ಯೂಸ್ » ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

Facebook
X
WhatsApp
Telegram

ಕೊಪ್ಪಳ.18.ಜುಲೈ.25: ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಕೊಪ್ಪಳ, ತಾಲೂಕು ಬಾಲ ಭವನ ಸಮಿತಿ ಯಲಬುರ್ಗಾ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 01ರಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.

ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೇಟ್ಟದೇಶ ಮಾಳೆಕೊಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಕ್ಕಳಲ್ಲಿ ಸೃಜನಾತ್ಮಕ ಕಲೆಗಳನ್ನು ಬೆಳೆಸಿಕೊಳ್ಳಲು ವಿವಿಧ ಸ್ಪರ್ಧೆಗಳು ಮತ್ತು ಕಾರ್ಯಕ್ರಮದ ಅವಶ್ಯಕತೆಯಿದೆ.

ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಅವರಲ್ಲಿ ಬೌದ್ಧಿಕ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಉಪಯೋಗವಾಗುತ್ತದೆ. ಇಂತಹ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಮಕ್ಕಳು ಭಾಗವಹಿಸಬೇಕು.

ಮಕ್ಕಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 01ರ ಮುಖ್ಯೋಪಾಧ್ಯರಾದ ಜಗದೀಶ ಚಂದ್ರ ಮಾತನಾಡಿ, ಮಕ್ಕಳಿಗೆ ಇಂತಹ ಕಾರ್ಯಕ್ರಮಗಳು ಅವಶ್ಯಕತೆಯಿದ್ದು, ಮಕ್ಕಳಿಗೆ ತಮ್ಮ ಕಲೆಯನ್ನು ಹೊರಹಾಕಲು ಇಂತಹ ಸ್ಪರ್ಧೆಗಳು ಅನುಕೂಲವಾಗಲಿವೆ. ಇದಕ್ಕಾಗಿ ಬಾಲ ಭವನ ಸೊಸೈಟಿ ರವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆಂದರು.


ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ & ಬಹುಮಾನ ವಿತರಣೆ: ಮ್ಯೂಜಿಕಲ್ ಚೇರ್ ಸ್ಪರ್ಧೆ ಮತ್ತು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ಗಣ್ಯ ಮಾನ್ಯರಿಂದ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಸಹ ಶಿಕ್ಷಕರ ವೃಂದ, ಅತಿಥಿ ಶಿಕ್ಷಕರ ವೃಂದ ಹಾಗೂ ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಸುಧಾ ಬಟ್ಟೂರ ಅವರು ಕಾರ್ಯಕ್ರಮದ ನಿರೂಪಿಸಿದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಮೆಹಬೂಬಸಾಬ ಇಲಾಹಿ ಅವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಾ ಬೆಟಗೇರಿ ಅವರು ವಂದಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!