ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಕೊಪ್ಪಳ.18.ಜುಲೈ.25: ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಕೊಪ್ಪಳ, ತಾಲೂಕು ಬಾಲ ಭವನ ಸಮಿತಿ ಯಲಬುರ್ಗಾ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 01ರಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.

ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೇಟ್ಟದೇಶ ಮಾಳೆಕೊಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಕ್ಕಳಲ್ಲಿ ಸೃಜನಾತ್ಮಕ ಕಲೆಗಳನ್ನು ಬೆಳೆಸಿಕೊಳ್ಳಲು ವಿವಿಧ ಸ್ಪರ್ಧೆಗಳು ಮತ್ತು ಕಾರ್ಯಕ್ರಮದ ಅವಶ್ಯಕತೆಯಿದೆ.

ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಅವರಲ್ಲಿ ಬೌದ್ಧಿಕ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಉಪಯೋಗವಾಗುತ್ತದೆ. ಇಂತಹ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಮಕ್ಕಳು ಭಾಗವಹಿಸಬೇಕು.

ಮಕ್ಕಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 01ರ ಮುಖ್ಯೋಪಾಧ್ಯರಾದ ಜಗದೀಶ ಚಂದ್ರ ಮಾತನಾಡಿ, ಮಕ್ಕಳಿಗೆ ಇಂತಹ ಕಾರ್ಯಕ್ರಮಗಳು ಅವಶ್ಯಕತೆಯಿದ್ದು, ಮಕ್ಕಳಿಗೆ ತಮ್ಮ ಕಲೆಯನ್ನು ಹೊರಹಾಕಲು ಇಂತಹ ಸ್ಪರ್ಧೆಗಳು ಅನುಕೂಲವಾಗಲಿವೆ. ಇದಕ್ಕಾಗಿ ಬಾಲ ಭವನ ಸೊಸೈಟಿ ರವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆಂದರು.


ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ & ಬಹುಮಾನ ವಿತರಣೆ: ಮ್ಯೂಜಿಕಲ್ ಚೇರ್ ಸ್ಪರ್ಧೆ ಮತ್ತು ಸಮೂಹ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ಗಣ್ಯ ಮಾನ್ಯರಿಂದ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಸಹ ಶಿಕ್ಷಕರ ವೃಂದ, ಅತಿಥಿ ಶಿಕ್ಷಕರ ವೃಂದ ಹಾಗೂ ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಸುಧಾ ಬಟ್ಟೂರ ಅವರು ಕಾರ್ಯಕ್ರಮದ ನಿರೂಪಿಸಿದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಮೆಹಬೂಬಸಾಬ ಇಲಾಹಿ ಅವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಾ ಬೆಟಗೇರಿ ಅವರು ವಂದಿಸಿದರು.

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

37 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

44 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago