ಯಲಬುರ್ಗಾ ಪೊಲೀಸ್ ಠಾಣೆ: ಕಾಣೆಯಾದವರ ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.25.ಜೂನ್.25:- ಯಲಬುರ್ಗಾ ಪಟ್ಟಣ ಹಾಗೂ ಯಲಬುರ್ಗಾ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಕಾಣೆಯಾದ ವ್ಯಕ್ತಿಗಳ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಪ್ರಕರಣ-1: ಗುನ್ನೆ ನಂ: 71/2024
ಯಲಬುರ್ಗಾ ತಾಲ್ಲೂಕಿನ ಬಂಡಿ ಗ್ರಾಮದ ನಿವಾಸಿ ಕಲ್ಲಪ್ಪ ಬಸಪ್ಪ ತೊಂಡಿಹಾಳ ಎಂಬ 47 ವರ್ಷದ ವ್ಯಕ್ತಿಯು 2023 ರ ಅಕ್ಟೋಬರ್ 18 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ವ್ಯಕ್ತಿಯು 5 ಅಡಿ ಎತ್ತರ, ಸದೃಢ ಮೈಕಟ್ಟು, ಸಾದಾಗೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದರು.


ಪ್ರಕರಣ-2: ಗುನ್ನೆ ನಂ: 70/2025
ಯಲಬುರ್ಗಾ ತಾಲ್ಲೂಕಿನ ಮಲಕಸಮುದ್ರ ಗ್ರಾಮದ ಕಲ್ಲಪ್ಪ ಭೀಮಪ್ಪ ಕಲ್ಲೂರು ಎಂಬ 56 ವರ್ಷದ ವ್ಯಕ್ತಿಯು 2023 ರ ಮೇ 15 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ವ್ಯಕ್ತಿಯು 5 ಅಡಿ ಎತ್ತರ, ಸದೃಢ ಮೈಕಟ್ಟು, ಸಾದಾಗೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಅಂಗಿ ಮತ್ತು ಲುಂಗಿ ಧರಿಸಿದ್ದರು.


ಪ್ರಕರಣ-3: ಗುನ್ನೆ ನಂ: 90/2025
ಯಲಬುರ್ಗಾ ತಾಲ್ಲೂಕಿನ ಮಲಕಸಮುದ್ರ ಗ್ರಾಮದ ದ್ಯಾಮಣ್ಣ ಲಕ್ಕಪ್ಪ ಗುರಿಕಾರ ಎಂಬ 55 ವರ್ಷದ ವ್ಯಕ್ತಿಯು 2020 ರ ಫೆಬ್ರವರಿ 21 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ವ್ಯಕ್ತಿಯು 5 ಅಡಿ ಎತ್ತರ, ಸದೃಢ ಮೈಕಟ್ಟು, ಸಾದಾಕೆಂಪು ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಅಂಗಿ, ದೋತರ ಧರಿಸಿದ್ದರು.


ಮೇಲ್ಕಂಡ ಚಹರೆಯ ವ್ಯಕ್ತಿಗಳ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ಪಿಎಸ್‌ಐ ದೂ.ಸಂ: 08534-220133, 9480803749, ಕೊಪ್ಪಳ ಕಂಟ್ರೋಲ್ ರೂಂ: 08539-220222 ಸಂಪರ್ಕಿಸಿ ಮಾಹಿತಿ ನೀಡಬೇಕು. ಕಾಣೆಯಾದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ಯಲಬುರ್ಗಾ ಪೊಲೀಸ್ ಠಾಣೆ ಪಿಎಸ್‌ಐ ಪ್ರಕಟಣೆಯಲ್ಲಿ ಕೋರಿದ್ದಾರೆ.

prajaprabhat

Recent Posts

ಗುತ್ತಿಗೆ ನೌಕರರು ಸ್ವಯಂಚಾಲಿತವಾಗಿ ಖಾಯಂ ?

ಬೆಂಗಳೂರು.01.ಜುಲೈ.25:- ಕರ್ನಾಟಕದಲ್ಲಿ, ರಾಜ್ಯ ಸರ್ಕಾರದ ಗುತ್ತಿಗೆ ನೌಕರರು ಸ್ವಯಂಚಾಲಿತವಾಗಿ ಖಾಯಂ ಆಗುವುದಿಲ್ಲ. ಕ್ರಮಬದ್ಧಗೊಳಿಸುವಿಕೆಗೆ ಒಂದು ಪ್ರಕ್ರಿಯೆ ಇದೆ, ಆದರೆ ಅದು…

16 minutes ago

ಕಲಬುರಗಿ ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್‌ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ.

ಕಲಬುರಗಿ.01.ಜುಲೈ.25:- ಕಲಬುರಗಿ ನಗರ ಹಾಗೂ ಜಿಲ್ಲೆಯನ್ನು ಹಸಿರೀಕರಣಗೊಳಿಸುವ ಸಲುವಾಗಿ ಬೃಹತ್‌ ಮಟ್ಟದಲ್ಲಿ ಗಿಡ ನೆಟ್ಟು ಪೋಷಣೆ ಮಾಡುವ ʼವನಮಹೋತ್ಸವʼ ಕಾರ್ಯಕ್ರಮಕ್ಕೆ…

53 minutes ago

ಐಎಎಸ್‌, ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು.01.ಜುಲೈ.25:- ರಾಜ್ಯದಲ್ಲಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ| ಕೆ.ಜಿ. ಜಗದೀಶ…

9 hours ago

ಕೃಷಿ ಡಿಪ್ಲೋಮಾ : ಪ್ರವೇಶ ಆರಂಭ

ಬೀದರ.01.ಜುಲೈ.25:- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಆಧೀನದಲ್ಲಿ ಬರುವ ಬೀದರ್ ತಾಲೂಕಿನ ಜನವಾಡಾ ಹತ್ತಿರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ೨೦೨೫-೨೬…

10 hours ago

ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ…

10 hours ago

ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ  NAAC A+  ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ,…

10 hours ago