Home » ಲೈವ್ ನ್ಯೂಸ್ » ಯಲಬುರ್ಗಾ: ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಯಲಬುರ್ಗಾ: ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.13.ಜೂನ್.26: ಯಲಬುರ್ಗಾ ಪಟ್ಟಣ ಪಂಚಾಯತ್ ವತಿಯಿಂದ ಪಿಎಂ ಸ್ವನಿಧಿ ಯೋಜನೆಯ ಲೋಕ ಕಲ್ಯಾಣ ಮೇಳದಡಿ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿಯಲ್ಲಿ ನಗರದ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಗಳ ಯೋಜನೆಗಳನ್ನು ಕಲ್ಪಿಸುವುದಕ್ಕಾಗಿ ನಗರ ಮಟ್ಟದಲ್ಲಿ ಬ್ಯಾಂಕ್‌ಗಳ ಸಂಯೋಗದೊAದಿಗೆ ಲೋಕ ಕಲ್ಯಾಣ ಮೇಳಗಳನ್ನು ಜೂನ್ 1 ರಿಂದ ಜೂ. 30ರ ವರೆಗೆ ಒಂದು ತಿಂಗಳ ಕಾಲ ಆಯೋಜಿಸುವಂತೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ ನವದೆಹಲಿ ಮತ್ತು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಬೆಂಗಳೂರು ರವರು ಸೂಚಿಸಿರುತ್ತಾರೆ.
ಅದರಂತೆ ಜೂ. 1 ರಿಂದ 30ರ ವರೆಗೆ ಯಲಬುರ್ಗಾ ಪಟ್ಟಣದ ಬೀದಿಬದಿ ವ್ಯಾಪಾರಿಗಳು ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ, ಪಿ.ಎಮ್ ಸ್ವನಿಧಿ ಯೋಜನೆಯಡಿ ರೂ. 15,000 ಗಳು, ರೂ. 25,000 ಗಳು ಮತ್ತು ರೂ. 50,000 ಗಳ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿಯನ್ನು ಸಲ್ಲಿಸಲು ನಗರ ಸ್ಥಳೀಯ ಸಂಸ್ಥೆಯ ಡೇ ನಲ್ಮ್ ವಿಭಾಗವನ್ನು ಸಂಪಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯಲಬುರ್ಗಾ ಪ.ಪಂ ಡೇ-ನಲ್ಮ್ ವಿಭಾಗದ ಸಿಬ್ಬಂದಿಗಳನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸುವಂತೆ ಯಲಬುರ್ಗಾ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology