ಚಾಮರಾಜನಗರ.02.ಏಪ್ರಿಲ್.25:- ಯಳಂದೂರು ಪಟ್ಟಣದ ತಾಲ್ಲೂಕು ಕಛೇರಿಯ ಸುತ್ತಲೂ ಪ್ಲಾಸ್ಟಿಕ್ ಮತ್ತು ಘನತ್ಯಾಜ್ಯ ವಸ್ತುಗಳಿಂದ ಕೂಡಿದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪ್ರತಿನಿತ್ಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುತ್ತಿದ್ದಾರೆ.
ಕಛೇರಿಯ ಸುತ್ತಲೂ ಅಶಿಸ್ತುನಿಂದ ಕೂಡಿರುವುದನ್ನು ನೋಡಿ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ ಆದರೂ ತಾಲ್ಲೂಕು ಆಡಳಿತ ನಿರ್ಜೀವ ವಸ್ತುವಿನಂತಾಗಿದೆ. ಇದರಿಂದ ತನ್ನ ನಿರ್ಲಕ್ಷ್ಯ ತನವನ್ನು ತೋರಿಸುತ್ತದೆ.
ಗಿಡದ ಬಳ್ಳಿಗಳು ತಾಲ್ಲೂಕು ಆಡಳಿತ ಕಟ್ಟಡದ ಮೇಲೆ ಏರಿದೆ ಗಿಡದ ಬಳ್ಳಿಯ ಮೂಲಕ ಹಾವು ಚೇಳುಗಳು ಕಟ್ಟಡದೊಳಗೆ ಪ್ರವೇಶ ಮಾಡಿ ಇವುಗಳ ವಾಸಸ್ಥಾನವಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿಗಳು ಪ್ಲಾಸ್ಟಿಕ್ ಮುಕ್ತ ಮಾಡಬೇಕೆಂದು ಪಣತೊಟ್ಟಿದ್ದಾರೆ ಆದರೆ ತಾಲ್ಲೂಕು ಕಛೇರಿಯ ಸುತ್ತಲೂ ಬರೀ ಪ್ಲಾಸ್ಟಿಕ್ ನಿಂದಲೇ ಕೂಡಿ ಅನೈರ್ಮಲ್ಯ ಸೃಷ್ಟಿಯಾಗಿದೆ.
ಸಾರ್ವಜನಿಕರಿಗೆ ಶಿಸ್ತಿನ ಬಗ್ಗೆ ತಿಳಿಸುವಂತಹ ಆಡಳಿತವೇ ಅಶಿಸ್ತಿನಿಂದ ಕೂಡಿದೆ.
ಬೇಸಿಗೆ ಹಿನ್ನಲೆಯಾದರೂ ಸಹ ಸಾರ್ವಜನಿಕರಿಗೆ ಕುಡಿಯುವ ನೀರುನ್ನು ಪೂರೈಸುವಂತಹ ಕೆಲಸ ಮಾಡಿಲ್ಲ. ಎಷ್ಟೋ ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳ ಮೊರೆಹೋಗಿದ್ದಾರೆ
ಕಾಟಾಚಾರಕ್ಕೆ ಇಲ್ಲಿನ ಆಡಳಿತ ಕಾರ್ಯ ನಿರ್ವಹಿಸುತ್ತದೆ ಎಂದರೆ ತಪ್ಪಾಗಲಾರದು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಾರ್ವಜನಿಕರು ದೂರಿದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…