ಯಶಸ್ವಿನಿ ಯೋಜನೆಗೆ ರಾಜ್ಯದಲ್ಲಿ ಕಾರ್ಯ ನಿರ್ವಹಿಸ್ತಿರುವ ಯಾವುದೇ ರೈತರು.ಸಹಕಾರ ಸಂಘ/ ಬ್ಯಾಂಕ್‌ಗಳ ಸದಸ್ಯರು ಅಥವ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ಸಹ ನೋಂದಣಿ ಆರಂಭ,

03 ಡಿಸೆಂಬರ್ 24:- ಬೆಂಗಳೂರು. ಕರ್ನಾಟಕ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ನೋಂದಣಿ 2025ಕ್ಕೆ ಚಾಲನೆ ನೀಡಿದೆ. ಈ ಯೋಜನೆಎಲಿ 5ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಪಡೆಯಬಹುದು.

ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಯಶಸ್ವಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು ಸ್ವಯಂ ನಿಧಿ ಸಹಕಾರ ಸಂಘಗಳ ಹಾಗೂ

(CO-operative Society Members Health Assurance Scheme)ಯೋಜನೆಯಾಗಿದ್ದು, ಸಹಕಾರ ಸಂಘಗಳ ಸದಸ್ಯರು ನಿಗದಿತ ವಾರ್ಷಿಕ ವಂತಿಗೆಯನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳುತ್ತಾರೆ. ರಾಜ್ಯ ಸರ್ಕಾರವು ಆಯವ್ಯಯದಲ್ಲಿ ಅನುದಾನ ಒದಗಿಸುವ ಮೂಲಕ ಯೋಜನೆಯಲ್ಲಿ ಭಾಗವಹಿಸುತ್ತದೆ. ಯಶಸ್ವಿನಿ ಯೋಜನೆಯನ್ನು 2024-25ನೇ ಸಾಲಿಗೂ ಮುಂದುವರೆಸಲು ಅನುವಾಗುವಂತೆ ಸದಸ್ಯರ ನೋಂದಣಿಯನ್ನು ಪ್ರಾರಂಭಿಸಲು ಯೋಜನೆಯ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದ್ದು, ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, “ಯಶಸ್ಸಿನಿ” ಯೋಜನೆಯನ್ನು 2024-25ನೇ ಸಾಲಿನಲ್ಲಿ ಮುಂದುವರೆಸಿ ಜಾರಿಗೊಳಿಸಲು ಈ ಕೆಳಕಂಡ ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸುವಂತೆ ನಿಬಂಧಕರು ಕೋರಿರುತ್ತಾರೆ.

ಯೋಜನೆಯ ಮಾರ್ಗಸೂಚಿಗಳು

ಯಾವುದೇ ಸಹಕಾರ ಸಂಘಗಳ ಕಾಯ್ದೆಗಳಡಿ (ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997 ಅಥವಾ ಬಹು ರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002) ನೋಂದಾಯಿಸಿ, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಹಕಾರ ಸಂಘ / ಬ್ಯಾಂಕುಗಳ (ಗ್ರಾಮೀಣ ಮತ್ತು ನಗರ ಸಹಕಾರ ಸಂಘಗಳು ಒಳಗೊಂಡಂತೆ) ಸದಸ್ಯರು ಅಥವಾ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು, ಸದಸ್ಯರಾಗಿ ಒಂದು ತಿಂಗಳು ಪೂರ್ಣಗೊಂಡಿದ್ದಲ್ಲಿ ಅಂತಹ ಸದಸ್ಯರು ಅಥವಾ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರಡಿ ನೋಂದಣಿಯಾಗಿ ಕಾರ್ಯನಿರತ ಸಹಕಾರ ಸಂಘಗಳಲ್ಲಿ ಕನಿಷ್ಠ ಮೂರು ವರ್ಷ ಸೇವೆ ಪೂರ್ಣಗೊಳಿಸಿ ಮಾಸಿಕ ರೂ.30,000/- ಮತ್ತು ಅದಕ್ಕಿಂತ ಕಡಿಮೆ ಒಟ್ಟು ವೇತನ ಪಡೆಯುತ್ತಿರುವ ನೌಕರರು ಮತ್ತು ಅವರ ಅರ್ಹ ಕುಟುಂಬ ಸದಸ್ಯರು ನಿಗದಿತ ವಾರ್ಷಿಕ ವಂತಿಗೆಯನ್ನು ಪಾವತಿಸಿ ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಅರ್ಹರಿರುತ್ತಾರೆ (ನೌಕರರಾಗಿದ್ದಲ್ಲಿ ಕನಿಷ್ಟ ಮೂರು ವರ್ಷ ಸೇವೆ ಮತ್ತು ರೂ.30,000/- ಮತ್ತು ಅದಕ್ಕಿಂತ ಕಡಿಮೆ ವೇತನ ಪಡೆಯುತ್ತಿರುವ ಬಗ್ಗೆ ಸಂಬಂಧಿಸಿದ ಸಹಕಾರ ಸಂಘದ ಆಡಳಿತ ಮಂಡಳಿ ದೃಢೀಕರಣ ಪತ್ರ ಲಗತ್ತಿಸಬೇಕು)

ಸಮಾಪನೆ / ನಿಷ್ಕ್ರಿಯಗೊಂಡಿರುವ ಸಹಕಾರ ಸಂಘಗಳ ಹಾಗೂ ನೌಕರರ ಸಹಕಾರ ಸಂಘಗಳ ಸದಸ್ಯರು ಅಥವಾ ಪ್ರಧಾನ ಅರ್ಜಿದಾರರು ಮತ್ತು ಅವನ ಕುಟುಂಬದ ಯಾವುದೇ ಸದಸ್ಯನು ಸರ್ಕಾರಿ ನೌಕರರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಅದೇ ರೀತಿ ಒಬ್ಬ ವ್ಯಕ್ತಿ ಖಾಸಗಿ ಕಂಪನಿ ಅಥವಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಾಸಿಕ ರೂ.30,000/-ಕ್ಕಿಂತ ಹೆಚ್ಚು ಒಟ್ಟು ವೇತನ ಪಡೆಯುತ್ತಿದ್ದಲ್ಲಿ ಅಥವಾ ಒಬ್ಬ ವ್ಯಕ್ತಿ ಯಾವುದೇ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಸದಸ್ಯರಾಗಿದ್ದಲ್ಲಿ ಅಂತಹವರು ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಅರ್ಹರಿರುವುದಿಲ್ಲ. ಅಂತಹವರನ್ನು ಯಶಸ್ವಿನಿ ಯೋಜನೆಯ ‘ಫಲಾನುಭವಿಯಾಗಿ ನೋಂದಾಯಿಸಬಾರದು. ಆದಾಗ್ಯೂ ಯಾವುದೇ ಕಾರಣಕ್ಕೆ ನೋಂದಾಯಿಸಿದ್ದಲ್ಲಿ ಸಹಿತ ಅವರು ಯೋಜನೆ ಸೌಲಭ್ಯ ಪಡೆಯಲು ಅರ್ಹರಾಗುವುದಿಲ್ಲ. ಅಂತಹ ವ್ಯಕ್ತಿಗಳು ಪಾವತಿಸಿದ ವಂತಿಗೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಯೋಜನೆಯಡಿ ನೋಂದಣಿಯಾದ ಸದಸ್ಯರಿಗೆ ಸರ್ಕಾರ ಮಾರ್ಚ್‌ 1ರಿಂದ ಐಡಿ ಕಾರ್ಡ್‌ಗಳನ್ನು ನೀಡಲಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕ್‌ಗಳ ಸದಸ್ಯರು ಅಥವ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ಸಹ ನೋಂದಣಿ ಮಾಡಿಕೊಳ್ಳಬಹುದು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

15 hours ago