09/06/2025 7:22 PM

Translate Language

Home » ಲೈವ್ ನ್ಯೂಸ್ » ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ.

ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ.

Facebook
X
WhatsApp
Telegram

ಬೆಂಗಳೂರು.22.ಏಪ್ರಿಲ್.25:- ರಾಜ್ಯ ಸರ್ಕಾರದಿಂದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಆಗುವ ಸಾಧ್ಯತೆಗಳಿವೆ. ರಾಜ್ಯದ ಜನತೆಗೆ  ನೀಡಲಾಗಿದೆ. ಯಶಸ್ವಿನಿ ಯೋಜನೆಯಡಿ ಶಸ್ತ್ರ ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ.

ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ‌ ಶಿಫಾರಸ್ಸುಗಳನ್ನು ಸಲ್ಲಿಸಿತು ಎಂದಿದೆ.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ. ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿಲ್ಲ ಎಂದಿದೆ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ|| ಶ್ರೀನಿವಾಸ್ ಎನ್. ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿದೆ.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿ-ಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.

ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.

ಇದರಿಂದಾಗಿ ಒಟ್ಟು 2191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ರ ವರವಿಗೆ ದರ ಹೆಚ್ಚಳವಾಗುವ ಅಂದಾಜಿದ್ದು ಅದರಂತೆ ಸುಮಾರು ರೂ.70.00 ಕೋಟಿ ರವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!