ಯಾದಗಿರಿ | ಸಂವಿಧಾನ ವಿರೋಧಿ ಧರ್ಮಶಾಸ್ತ್ರ ಗ್ರಂಥ ಜಾರಿಗೊಳಿಸಲು ಬಿಡುವುದಿಲ್ಲ : ಮಲ್ಲಿಕಾರ್ಜುನ ಕ್ರಾಂತಿ

ಯಾದಗಿರಿ.30.ಜನವರಿ.25:- ಸುರಪುರ ದಲಿತ್ ಸಂಘಟನೆಗಳು ಎಚೇರಿಕೆ.ದೇಶದಲ್ಲಿ ಫೆ.3 ರಂದು ಸಂವಿಧಾನ ವಿರೋಧಿಯಾಗಿರುವ ಧರ್ಮಶಾಸ್ತ್ರ ಎನ್ನುವ ಹೆಸರಲ್ಲಿ ಮನುಸ್ಮೃತಿ ಗ್ರಂಥ ಸಂವಿಧಾನದ ಜಾಗದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಕ್ರೋಶ ವ್ಯಕ್ತಪಡಿಸಿದರು.

ಸುರಪುರ ನಗರದಲ್ಲಿ ಸಂಘಟನೆಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಎಲ್ಲರಿಗೂ ನ್ಯಾಯ ನೀಡುವ, ಸರ್ವರ ಹಿತಾಯ ಸರ್ವರ ಸುಖಾಯ ಎನ್ನುವಂತ ಸಂವಿಧಾನದ ಬದಲು ಮನುವಾದಿಗಳು ದೇಶದ ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ವಿರೋಧಿಯಾಗಿರುವ ಧರ್ಮಶಾಸ್ತ್ರ ಎನ್ನುವ ಗ್ರಂಥ ಜಾರಿಗೆ ತರಲು ಮುಂದಾಗಿರುವುದನ್ನು ಖಂಡಿಸುತ್ತೇವೆ, ಅಲ್ಲದೆ ಇದನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡಬಾರದು ಎಂದು ಒತ್ತಾಯಿಸುತ್ತೇವೆ, ಇಲ್ಲವಾದಲ್ಲಿ ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ  ದಲಿತ್ ವಿವಿಧ ಸಂಘಟನೆ ಮುಖಂಡರಾದ ಶ್ರೀನಿವಾಸ ನಾಯಕ ಬೊಮ್ಮನಹಳ್ಳಿ, ನಿಂಗಣ್ಣ ಗೋನಾಲ, ರವಿಚಂದ್ರ ಬೊಮ್ಮನಹಳ್ಳಿ ಸೇರಿದಂತೆ ಅನೇಕರು ಮಾತನಾಡಿದರು. ನಂತರ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲ ಮಲ್ಲಿಕಾರ್ಜುನ ತಳ್ಳಳ್ಳಿ,ತಾಲೂಕ ಸಂಚಾಲಕ ಬಸವರಾಜ ದೊಡ್ಮನಿ ಶೆಳ್ಳಗಿ,ದೇವಿಂದ್ರಪ್ಪ ಬಳಿಚಕ್ರ, ಮಲ್ಲಿಕಾರ್ಜುನ ವಾಗಣಗೇರಾ, ಮಾನಪ್ಪ ಕಟ್ಟಿಮನಿ, ಅಪ್ಪಣ್ಣ ಗಾಯಕವಾಡ, ಮಾನಪ್ಪ ಶೆಳ್ಳಗಿ, ಶಿವಶಂಕರ ಬೊಮ್ಮನಹಳ್ಳಿ, ಶರಣಪ್ಪ ತಳವಾರಗೇರಾ, ಹಣಮಂತ ಬಿಲ್ಲವ್,ಮಲ್ಲಿಕಾರ್ಜುನ ಮುಷ್ಠಳ್ಳಿ,ರಾಮಣ್ಣ ಶೆಳ್ಳಗಿ ಸೇರಿದಂತೆ ಅನವಾಗಣಗೇರಾ ವಹಿಸಿದ್ದರು.

ಈ ಸಂದರ್ಭದಲ್ಲಿ  ದಲಿತ್ ವಿವಿಧ ಸಂಘಟನೆ ಮುಖಂಡರಾದ ಶ್ರೀನಿವಾಸ ನಾಯಕ ಬೊಮ್ಮನಹಳ್ಳಿ, ನಿಂಗಣ್ಣ ಗೋನಾಲ, ರವಿಚಂದ್ರ ಬೊಮ್ಮನಹಳ್ಳಿ ಸೇರಿದಂತೆ ಅನೇಕರು ಮಾತಾಡಿದ್ರು.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

13 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

29 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

39 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago