ಮುಳ್ಳೂರು.15.ಫೆ.25:- ಕಳೆದ ೨೦೨೪ರ ಆ.೩೦ರಂದು ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತು.
ಎರಡು ದಶಕಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಾ ಬಂದಿದ್ದ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ.
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿ ಮಾಡಿ ರುವ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಸೇವೆಯನ್ನು 2024–25ನೇ ಸಾಲಿಗೆ ಬಳಸಿಕೊಳ್ಳದೇ ಇರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಯುಜಿಸಿ ನಿಗದಿ ಮಾಡಿರುವ ಅರ್ಹತೆ ಗಳನ್ನೇ ಅತಿಥಿ ಉಪನ್ಯಾಸಕರ ಆಯ್ಕೆಗೂ ಅನ್ವಯಿಸಬೇಕು ಎಂದು ಹೈಕೋರ್ಟ್ ಕಳೆದ ಸೆಪ್ಟೆಂಬರ್‌ನಲ್ಲಿ ತೀರ್ಪು ಪ್ರಕಟಿಸಿತ್ತು. ಹಾಗಾಗಿ, ಕಾಲೇಜು ಶಿಕ್ಷಣ ಇಲಾಖೆ ಯುಜಿಸಿ ಅರ್ಹತೆ ಹೊಂದಿಲ್ಲ ದವರನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಅದರ ಪ್ರಕಾರ ಅನುಭವಿ ಅತಿಥಿ ಉಪನ್ಯಾಸಕರಿಗೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಅಧಿಸೂಚನೆಯ ಅನ್ವಯ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ಮುನ್ನವೇ ೨೦೨೪ರ ಸೆ.೧೨ರಂದು ರಾಜ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ಯುಜಿಸಿ ಅರ್ಹತೆ ಉಳ್ಳವರನ್ನು ಮಾತ್ರ ಅತಿಥಿ ಉಪನ್ಯಾಸಕರಾಗಿ ನೇಮಿಸಿಕೊಳ್ಳಬೇಕು ಎಂದು ಆದೇಶಿಸಿತು.
ಆದರೆ ರಾಜ್ಯ ಉನ್ನತ ಶಿಕ್ಷಣ ಸಚಿವರು ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಯುಜಿಸಿ ಅನರ್ಹ ಅಭ್ಯರ್ಥಿಗಳ ಪರವಾಗಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರು.
ಆದರೆ ಉಚ್ಚ ನ್ಯಾಯಾಲಯದ ಬಹುಸದಸ್ಯ ಪೀಠವೂ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿಯಿತು. ಇದಾದ ಬಳಿಕ ೨೦೨೫ರ ಜ.೨ರಂದು ಯುಜಿಸಿ ಅರ್ಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ನೇಮಿಸಿಕೊಳ್ಳಲು ಅಧಿಸೂಚನೆ ಹೊರಡಿಸಿತು.
ಆದರೆ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಕೌನ್ಸಿಲಿಂಗ್ ಆರಂಭವಾಗುವ ಮುನ್ನವೇ ಉನ್ನತ ಶಿಕ್ಷಣ ಸಚಿವರ ಸಹಕಾರದಿಂದಲೋ ಏನೋ ಅನರ್ಹ ಅತಿಥಿ ಉಪನ್ಯಾಸಕರು ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಬೆಂಗಳೂರು ಹಾಗೂ ಧಾರವಾಡ ನ್ಯಾಯಾಲಯಗಳ ಮೂಲಕ ತಡೆಯಾಜ್ಞೆ ತಂದಿದ್ದಾರೆ. ಅನರ್ಹ ಅಭ್ಯರ್ಥಿಗಳಿಗೆ ಯುಜಿಸಿ ಅರ್ಹತೆ ಪಡೆದುಕೊಳ್ಳಲು ಮೂರು ವರ್ಷಗಳ ಕಾಲಾವಕಾಶವನ್ನು ನೀಡಲಾಗಿತ್ತು. ಆ ಕಾಲಾವಕಾಶ ಜ.೧೩ಕ್ಕೆ ಮುಗಿದು ಹೋಗಿದೆ.
ಆದ್ದರಿಂದ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಯುಜಿಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಸರ್ಕಾರ ಸುಲಭವಾಗಿ ಈ ತಡೆಯಾಜ್ಞೆಯನ್ನು ತೆರವುಗೊಳಿಸಬಹುದು.
ಆದರೆ ಉನ್ನತ ಶಿಕ್ಷಣ ಸಚಿವರು ತಡೆಯಾಜ್ಞೆಯನ್ನು ತೆರವುಗೊಳಿಸುವ ಬದಲು ಯುಜಿಸಿ ಅರ್ಹತಾ ಅಭ್ಯರ್ಥಿಗಳನ್ನು ನಿರುದ್ಯೋಗಿಗಳನ್ನಾಗಿ ಮಾಡಿ ಅನರ್ಹರನ್ನು ಅತಿಥಿ ಉಪನ್ಯಾಸಕರಾಗಿ ಮುಂದುವರಿಸುತ್ತಿದ್ದಾರೆ.
ಉನ್ನತ ಶಿಕ್ಷಣ ಸಚಿವರ ಈ ವರ್ತನೆಯಿಂದ ಅರ್ಹ ಅಭ್ಯರ್ಥಿಗಳು ಬೇಸತ್ತು ಹೋಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಗಮನಹರಿಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕಿದೆ.
-ಎಂ.ಆರ್.ಮಹೇಶ, ಮುಳ್ಳೂರು, ಸರಗೂರು ತಾ
ಕೊಪ್ಪಳ.13.ಆಗಸ್ಟ್.25 ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ…
ಕೊಪ್ಪಳ.13.ಆಗಸ್ಟ್.25: ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಹೆಚ್.ಐ.ವಿ. ಏಡ್ಸ್ ಜಾಗೃತಿ ಅರಿವಿನ…
ಬೀದರ.13.ಆಗಸ್ಟ್.25:- ಇಂದು ಬೀದರ್ ಜಿಲ್ಲಾಡಳಿತ ವತಿಯಿಂದ ನಶಾ ಮುಕ್ತ ಭಾರತ ಅಭಿಯಾನ" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ…
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
View Comments
Yes , exactly
Take the eligible candidates not the experience one do upgrade the system
Every thing need a change do change this in a positive way
I support eligibility
I am already KSET Qualified but I have applied for guest faculty application.
Please , kindly UGC qualified pls give post