ಯುಜಿಸಿ- ಇಟಿ-25 ಪರೀಕ್ಷೆ ನಡೆಸಲು ಸಕಲ ತಯಾರಿ

ಬೆಂಗಳೂರು.20.ಮಾರ್ಚ.25:- ಕರ್ಣಾಟಕ ರಾಜ್ಯದಲ್ಲಿ ತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಯುಜಿಸಿಇಟಿ-25 ಪರೀಕ್ಷೆ ನಡೆಸಲು ಸಕಲ ತಯಾರಿ ಮಾಡಿಕೊಳ್ಳುತ್ತಿದ್ದು,  ರಾಜ್ಯದ ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ಇರುವ ದೋಷಗಳನ್ನು ಸರಿಪಡಿಸಿಕೊಳ್ಳಲು ಸಿಇಟಿ ಪರೀಕ್ಷೆ ನಂತರವೂ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಯುಜಿ ಸಿಇಟಿ ಪರೀಕ್ಷೆ ಏಪ್ರಿಲ್‌ 16 ಮತ್ತು 17ರಂದು ನಡೆಯಲಿದೆ. ಹೊರನಾಡು-ಗಡಿನಾಡು ಕನ್ನಡಿಗರಿಗೆ ಏ.15ರಂದು ಕನ್ನಡ ಪರೀಕ್ಷೆ ನಡೆಯಲಿದೆ. ಇದಕ್ಕೆ ಸದ್ಯದಲ್ಲೇ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಅವಕಾಶ ನೀಡಲಾಗುವುದು. ಈ ಪರೀಕ್ಷೆ ಬಳಿಕವೂ ಅರ್ಜಿಯಲ್ಲಿನ ದೋಷ ಸರಿಪಡಿಸಲು ಅವಕಾಶ ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ.

ಪ್ರಸಕ್ತ ಸಾಲಿಗೆ ಒಟ್ಟು 3,64,778 ಮಂದಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 3,44,989 ಮಂದಿ ಶುಲ್ಕ ಪಾವತಿಸಿದ್ದಾರೆ. ಈ ಪೈಕಿ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್‌ (sats) ವ್ಯವಸ್ಥೆ ಮೂಲಕವೇ 1.36 ಲಕ್ಷ ಅಭ್ಯರ್ಥಿಗಳ ದಾಖಲೆಗಳು ಆನ್‌ಲೈನ್‌ನಲ್ಲಿ ಪರಿಶೀಲನೆಗೆ ಒಳಗಾಗಿವೆ. ಹಾಗೆಯೇ 1.64 ಲಕ್ಷ ಮಂದಿ, ಕಾಲೇಜುಗಳಲ್ಲಿ ತಮ್ಮ ದಾಖಲೆ ಪರಿಶೀಲನೆ ಮಾಡಿಸಿಕೊಂಡು ಅರ್ಹತೆ ಪಡೆದಿದ್ದಾರೆ.

ಇನ್ನೂ ಸುಮಾರು 44.200 ಸಾವಿರ ಅಭ್ಯರ್ಥಿಗಳು ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕಿದ್ದು, ಅವರಲ್ಲಿ ಯಾರ ಕ್ಲೇಮ್ ಚೀಟಿಯಲ್ಲಿ ಪರಿಶೀಲನೆ ಆಗಿಲ್ಲ (Not Verified) ಎಂದು ನಮೂದಾಗಿರುತ್ತದೊ ಅಂತಹವರು ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ವಿಜ್ಞಾನ ಕಾಲೇಜಿನಲ್ಲಿ ಪರಿಶೀಲನೆ ಮಾಡಿಸಿಕೊಳ್ಳಬಹುದು ಎಂದು ಸೂಚಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago