ಯುಜಿಸಿ ಕರಡು ಉನ್ನತ ಶಿಕ್ಷಣಕ್ಕೆ ಮಾರಕ: ವಿ.ಎನ್‌.ರಾಜಶೇಖರ

ದಾವಣಗೆರೆ.29.ಜನವರಿ.25: ಇಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಉಪಾಧ್ಯಕ್ಷ ವಿ.ಎನ್‌.ರಾಜಶೇಖರ ಅವರು ಯುಜಿಸಿ ಕರಡು ಉನ್ನತ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ ರೂಪಿಸಿರುವ ಹೊಸ ನಿಯಮಗಳ ಕರಡು ಉನ್ನತ ಶಿಕ್ಷಣಕ್ಕೆ ಮಾರಕವಾಗಿದೆ.

ಇಂದು ಶಿಕ್ಷಣವನ್ನು ಜಾಗತಿಕ ಸರಕಾಗಿ ರೂಪಿಸುವ ಹುನ್ನಾರವಾಗಿದೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಉಪಾಧ್ಯಕ್ಷ ವಿ.ಎನ್‌.ರಾಜಶೇಖರ ಆರೋಪಿಸಿದರು.

ಯುಜಿಸಿ’ಉನ್ನತ ಶಿಕ್ಷಣದಲ್ಲಿ ಬದಲಾವಣೆ ತರುವ ಉದ್ದೇಶದಿಂದ ರೂಪಿಸಿದ ಕರಡಿನ ಬಗ್ಗೆ ಜನರು ಜಾಗೃತರಾಗುವ ಅಗತ್ಯವಿದೆ. ಸಾರ್ವಜನಿಕ ಚರ್ಚೆಯಲ್ಲಿ ಪಾಲ್ಗೊಂಡು ಉನ್ನತ ಶಿಕ್ಷಣವನ್ನು ಉಳಿಸಬೇಕಿದೆ. ಇಲ್ಲವಾದರೆ ವಿಶ್ವವಿದ್ಯಾಲಯಗಳು ಉದ್ಯಮಗಳಾಗಿ ಪರಿವರ್ತನೆ ಹೊಂದುವ ಅಪಾಯವಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ವಿಶ್ವವಿದ್ಯಾಲಯಗಳ ಕಲ್ಪನೆ ಹಾಗೂ ಉದ್ದೇಶಕ್ಕೆ ಕರಡು ವಿರುದ್ಧವಾಗಿದೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಕೋಮುವಾದದಿಂದ ನಲುಗಿದ ವಿಶ್ವವಿದ್ಯಾಲಯಗಳ ಸ್ವಾಯತ್ತತೆ ಸಂಪೂರ್ಣ ನಶಿಸಿ ಹೋಗಲಿದೆ.

ಆಡಳಿತಾತ್ಮಕ ಕೇಂದ್ರೀಕರಣವು ಸಂಶೋಧನೆ, ಶೈಕ್ಷಣಿಕ ಪ್ರಗತಿಗೆ ಅಡ್ಡಿಯುಂಟು ಮಾಡಲಿದೆ. ಆಡಳಿತ ಪಕ್ಷಗಳ ಸಿದ್ಧಾಂತವನ್ನು ಪಠ್ಯದಲ್ಲಿ ತುರುಕುವ ಸಾಧ್ಯತೆ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಕುಲಪತಿ ಹಾಗೂ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಮಾಡಿರುವ ಬದಲಾವಣೆಗಳು ಅಪಾಯಕಾರಿಯಾಗಿವೆ. ಪ್ರಜಾಸತ್ತಾತ್ಮಕ ಶಿಕ್ಷಣದ ಮೂಲ ಅಡಿಪಾಯವನ್ನೇ ಅಲುಗಾಡಿಸುವಂತಿವೆ. ಕುಲಪತಿ ನೇಮಕದ ಅಧಿಕಾರವನ್ನು ಕೇಂದ್ರ ಕಸಿದುಕೊಳ್ಳಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಸ್ತಕ್ಷೇಪದಿಂದ ವಿಶ್ವವಿದ್ಯಾಲಯಗಳು ಮುಕ್ತವಾಗಬೇಕಿದೆ’ ಎಂದು ಹೇಳಿದರು.

‘ಯುಜಿಸಿ ಕರಡು ನಿಯಮಗಳ ಕುರಿತು ಚರ್ಚಿಸಲು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಫೆ.1ರಂದು ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ಕ್ಕೆ ಸಭೆ ಆರಂಭವಾಗಲಿದ್ದು, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ವಿಶ್ರಾಂತ ಕುಲಪತಿಗಳಾದ ಪ್ರೊ.ಮಲ್ಲಿಕಾ ಘಂಟಿ, ಪ್ರೊ.ಎ.ಎಚ್‌.ರಾಜಾಸಾಬ್‌, ಪ್ರೊ.ಟಿ.ಡಿ.ಕೆಂಪರಾಜು ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಸಮಿತಿಯ ಜಿಲ್ಲಾ ಸಂಘಟನಕಾರ ತಿಪ್ಪೇಸ್ವಾಮಿ, ಉಪನ್ಯಾಸಕರಾದ ಹೇಮಾವತಿ, ಸುಮಾ ವಿ.ಮಠದ್‌ ಹಾಜರಿದ್ದರು.

ಅನುರಾಧಾ, ನಿವೃತ್ತ ಪ್ರಾಧ್ಯಾಪಕಿವಿಶ್ವವಿದ್ಯಾಲಯಗಳು ವೈಚಾರಿಕತೆ, ಸಂಶೋಧನೆ ಆಧಾರದ ಮೇರೆಗೆ ಮುನ್ನಡೆಯುತ್ತಿದ್ದವು.

ಯುಜಿಸಿ ಹೊಸ ಕರಡು ಸಂವಿಧಾನದ ಆಶಯಕ್ಕೆ ಧಕ್ಕೆ ತರುವಂತಿದೆದಾದಾಪೀರ್‌ ನವಿಲೇಹಾಳ್‌, ನಿವೃತ್ತ ಪ್ರಾಧ್ಯಾಪಕಯುಜಿಸಿಯ ಹೊಸ ಕರಡು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿದೆ. ಉನ್ನತ ಶಿಕ್ಷಣ ಖಾಸಗಿ ಹಿಡಿತಕ್ಕೆ ಸಿಲುಕಿದರೆ ಗ್ರಾಮೀಣ ಪ್ರತಿಭೆಗಳಿಗೆ ತೊಂದರೆ ಆಗಲಿದೆ

ಯುಜಿಸಿ ಕರಡು ನಿಯಮಗಳ ಕುರಿತು ಚರ್ಚಿಸಲು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಫೆ.1ರಂದು ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ಕ್ಕೆ ಸಭೆ ಆರಂಭವಾಗಲಿದ್ದು, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಯುಜಿಸಿ ಹೊಸ ನಿಯಮಾವಳಿಗೆ ಬಹಳಷ್ಟು ರಾಜ್ಯ ಸರಕಾರ ವಿರೋಧ ವ್ಯಕ್ತಪಡಿಸಿದರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ  ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ

ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …

1 hour ago

ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು

ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…

2 hours ago

ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜ್ ನ ಬಿ ಎಸ್ ಸಿ ಪದವಿಯಲ್ಲಿ ಮಧು ಸಿ. ಕಾಲೇಜ್ ಗೆ ಟಾಪರ್

ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ  ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…

2 hours ago

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

6 hours ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

17 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

1 day ago