ಬೆಂಗಳೂರು.06.ಫೆ.25:- ರಾಜ್ಯ ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ ರೂಪಿಸಿರುವ ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ.
ಬೆಂಗಳೂರುನಲಿ ಬುಧವಾರ ನಡೆದ ವಿವಿಧ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶದಲ್ಲಿ ಕರ್ನಾಟಕವೂ ಸೇರಿ ಆರು ರಾಜ್ಯಗಳ ಸಚಿವರು ಭಾಗವಹಿಸಿದ್ದರು.
ವಿಶ್ವವಿದ್ಯಾಲಯಗಳ ಕುಲಪತಿ ನೇಮಕಾತಿಯೂ ಒಳಗೊಂಡಂತೆ ಯುಜಿಸಿ ಬಿಡುಗಡೆ ಮಾಡಿರುವ ಎಲ್ಲ ಕರಡು ನಿಯಮಗಳನ್ನು ತಕ್ಷಣವೇ ಹಿಂಪಡೆಯಬೇಕು. ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಹಿಮಾಚಲ ಪ್ರದೇಶದ ರೋಹಿತ್ ಠಾಕೂರ್, ಜಾರ್ಖಂಡ್‌ನ ಸುದಿವ್ಯಕುಮಾರ್, ತೆಲಂಗಾಣದ ಶ್ರೀಧರ್ ಬಾಬು, ತಮಿಳುನಾಡಿನ ಗೋವಿ ಸಿಝಿಯಾನ್, ಕೇರಳದ ಆರ್. ಬಿಂದು ಭಾಗವಹಿಸಿದ್ದರು.
ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಅಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರಿಗೆ ನೀಡಲಾಗಿದೆ.
ಪ್ರಸ್ತುತ ಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರಗಳೇ ಶೋಧನಾ ಸಮಿತಿ ರಚಿಸುತ್ತಿದ್ದವು. ಕುಲಾಧಿಪತಿಯೂ ಆದ ರಾಜ್ಯಪಾಲರು ಸಮಿತಿಯ ಸದಸ್ಯರನ್ನೂ ಶಿಫಾರಸು ಮಾಡುವ ಅಧಿಕಾರ ಹೊಂದಿದ್ದರು’ ಎಂದರು.
ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಅಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರಿಗೆ ನೀಡಲಾಗಿದೆ. ಪ್ರಸ್ತುತ ಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರಗಳೇ ಶೋಧನಾ ಸಮಿತಿ ರಚಿಸುತ್ತಿದ್ದವು. ಕುಲಾಧಿಪತಿಯೂ ಆದ ರಾಜ್ಯಪಾಲರು ಸಮಿತಿಯ ಸದಸ್ಯರನ್ನೂ ಶಿಫಾರಸು ಮಾಡುವ ಅಧಿಕಾರ ಹೊಂದಿದ್ದರು’ ಎಂದರು.
ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗುತ್ತಾರೆ. ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ಹುದ್ದೆಗಳಲ್ಲಿ ಬೇರೆ ರಾಜ್ಯದವರಿಗೂ ಅವಕಾಶ ಮಾಡಿಕೊಡಲಾಗಿದೆ.
ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ, ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರು ಕುಲಪತಿಗಳಾಗುತ್ತಾರೆ. ಇದು ಉನ್ನತ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ನಾಂದಿಯಾಡುತ್ತದೆ. ಸಾರ್ವಜನಿಕ ವಿಶ್ವವಿದ್ಯಾಲಯಗಳು ಬಾಗಿಲು ಮುಚ್ಚಬೇಕಾಗುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉತ್ತೇಜನ ದೊರಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಒಂದು ರಾಜ್ಯಕ್ಕೂ ಮತ್ತೊಂದು ರಾಜ್ಯಕ್ಕೂ ಪದವಿ ಕೋರ್ಸ್‌ಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿ ಭಿನ್ನವಾಗಿರುತ್ತದೆ. ಯುಜಿಸಿ ನಿಯಮ ತಿದ್ದುಪಡಿ ಕರಡು ಪ್ರಕಾರ ಎಲ್ಲ ಪದವಿಗಳಿಗೆ ಪ್ರವೇಶ ಪರೀಕ್ಷೆ ನಡೆಸಲು ಸಾಧ್ಯವಿಲ್ಲ.
ಕಲಾ ವಿಷಯ ಸೇರಿದಂತೆ ಹಲವು ಕೋರ್ಸ್‌ಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿವೆ. ಇನ್ನು ಪ್ರವೇಶ ಪರೀಕ್ಷೆ ನಡೆಸಿದರೆ ಕೋರ್ಸ್‌ಗಳನ್ನೇ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಸಚಿವ ಸುಧಾಕರ್ ಹೇಳಿದರು.
ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಅಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರಿಗೆ ನೀಡಲಾಗಿದೆ.
ಪ್ರಸ್ತುತ ಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರಗಳೇ ಶೋಧನಾ ಸಮಿತಿ ರಚಿಸುತ್ತಿದ್ದವು. ಕುಲಾಧಿಪತಿಯೂ ಆದ ರಾಜ್ಯಪಾಲರು ಸಮಿತಿಯ ಸದಸ್ಯರನ್ನೂ ಶಿಫಾರಸು ಮಾಡುವ ಅಧಿಕಾರ ಹೊಂದಿದ್ದರು’ ಎಂದರು.
ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗುತ್ತಾರೆ. ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ಹುದ್ದೆಗಳಲ್ಲಿ ಬೇರೆ ರಾಜ್ಯದವರಿಗೂ ಅವಕಾಶ ಮಾಡಿಕೊಡಲಾಗಿದೆ. ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ, ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರು ಕುಲಪತಿಗಳಾಗುತ್ತಾರೆ.
ಇದು ಉನ್ನತ ಶಿಕ್ಷಣದ ಗುಣಮಟ್ಟ ಕುಸಿತಕ್ಕೆ ನಾಂದಿಯಾಡುತ್ತದೆ. ಸಾರ್ವಜನಿಕ ವಿಶ್ವವಿದ್ಯಾಲಯಗಳು ಬಾಗಿಲು ಮುಚ್ಚಬೇಕಾಗುತ್ತದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಉತ್ತೇಜನ ದೊರಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಒಂದು ರಾಜ್ಯಕ್ಕೂ ಮತ್ತೊಂದು ರಾಜ್ಯಕ್ಕೂ ಪದವಿ ಕೋರ್ಸ್‌ಗಳ ಆಯ್ಕೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿ ಭಿನ್ನವಾಗಿರುತ್ತದೆ.
ವಿಶ್ವವಿದ್ಯಾಲಯ ಅನುದಾನ ಆಯೋಗ ನಿಯಮ ತಿದ್ದುಪಡಿ ಕರಡು ಪ್ರಕಾರ ಎಲ್ಲ ಪದವಿಗಳಿಗೆ ಪ್ರವೇಶ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಕಲಾ ವಿಷಯ ಸೇರಿದಂತೆ ಹಲವು ಕೋರ್ಸ್‌ಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿವೆ. ಇನ್ನು ಪ್ರವೇಶ ಪರೀಕ್ಷೆ ನಡೆಸಿದರೆ ಕೋರ್ಸ್‌ಗಳನ್ನೇ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಸಚಿವ ಸುಧಾಕರ್ ಹೇಳಿದರು.
ಆರು ರಾಜ್ಯಗಳೂ ವಿಶ್ವವಿದ್ಯಾಲಯ ಅನುದಾನ ಆಯೋಗ 2025 ಕರಡು ನಿಯಮವಾಗಳಿಗೆ ತಿಡುಪಡಿ ಮಾಡುತ್ತಿದ್ದಾರೆ
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…