ಸಿಂಧನೂರು.08.ಜು.25:- ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ಗೊಂದ ಸೃಷ್ಟಿಸದೆ ಎಲ್ಲ ಅತಿಥಿ ಉಪನ್ಯಾಸಕರನ್ನು ಆಯ್ಕೆಗೆ ಪರಿಗಣಿ ಸಲು ಜುಲೈ 10 ರವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ನಿರ್ಲಕ್ಷ್ಯ ವಹಿಸಿದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅತಿಥಿ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಪಾಟೀಲ್ ಗೋನಾಳ, ಉಪಾಧ್ಯಕ್ಷ ಡಾ.ಮದಗಪ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿ ರಾಮಣ್ಣ ಹಿರೇಬೇರಿಗಿ, ಖಜಾಂಚಿ ನರಸಪ್ಪ ಬೆಳಗುರ್ಕಿ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಹೇಳಿಕೆ ನೀಡಿರುವ ಅವರು, ಕಾಲೇಜು ಶಿಕ್ಷಣ ಇಲಾಖೆಯು ಜೂನ್ 25, 2025 ರಂದು 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅಧಿ ಸೂಚನೆ ಹೊರಡಿಸಿದೆ. ಇದರಲ್ಲಿ ಕೇವಲ ಯುಜಿಸಿ ಅರ್ಹತೆ ಹೊಂದಿರುವ ಅಂದರೆ ನೆಟ್, ಪ್ಲೆಟ್, ಪಿಎಚ್‌ಡಿ ಹೊಂದಿರುವವರನ್ನು ಮಾತ್ರ ಪರಿಗಣಿ
ಸುವಂತೆ ಸೂಚಿಸಲಾಗಿದೆ. ಸುಮಾರು 15-20 ವರ್ಷಗಳಿಂದ ಇದೇ ವೃತ್ತಿ ಯನ್ನು ನಂಬಿ ಅತ್ಯಂತ ಕನಿಷ್ಠ ವೇತನಕ್ಕೆ ದುಡಿಯುತ್ತಾ ಬಂದಿರುವ 11 ಸಾವಿರ ಕ್ಕೂ ಹೆಚ್ಚು ಉಪನ್ಯಾಸಕರ ಪೈಕಿ 5500 ಕ್ಕೂ ಹೆಚ್ಚು ಉಪನ್ಯಾಸಕರು ಯುಜಿಸಿ ಅರ್ಹತೆ ಹೊಂದಿಲ್ಲ ಎನ್ನುವ ಕಾರಣಕ್ಕೆ ಅವರನ್ನು ಇಷ್ಟು ವರ್ಷ ಕಡಿಮೆ ವೇತ ನಕ್ಕೆ ದುಡಿಸಿಕೊಂಡು ಶೋಷಣೆ ಮಾಡಿ ಕೈ ಬಿಡುತ್ತಿರುವುದು ನಿಜಕ್ಕೂ ದುರಂತದ ಸಂಗತಿ ಎಂದು ದೂರಿದ್ದಾರೆ.
ಈ ವೃತ್ತಿಯನ್ನು ನಂಬಿ ಬದು ಕುತ್ತಿರುವ ಉಪನ್ಯಾಸಕರನ್ನು ಮತ್ತು ಅವರ ಕುಟುಂಬವನ್ನು ಸ್ವತಃ ಸರ್ಕಾ ರವೇ ಬೀದಿಪಾಲು ಮಾಡಲು ಹೊರ ಟಿದೆ. ಉದ್ಯೋಗ ನೀಡುವ ಸರ್ಕಾರವೇ ಉದ್ಯೋಗ ಕಸಿಯುತ್ತಿದೆ. ಕಾರಣ ಸರ್ಕಾರವು ಕೂಡಲೇ ಈ ಅಧಿಸೂಚನೆ ಯನ್ನು ಹಿಂಪಡೆದು ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ಗೊಂದಲ ಸೃಷ್ಟಿಸದೆ ಎಲ್ಲ ಅತಿಥಿ ಉಪನ್ಯಾಸಕರನ್ನು ಆಯ್ಕೆಗೆ ಪರಿಗಣಿಸಬೇಕು. ಜು.10 ಸರ್ಕಾರಕ್ಕೆ ಕೊನೆಯ ಗಡುವು ಆಗಿದೆ ಎಂದು ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…