ಯುಜಿಸಿ ನಿಯಮ,ಉದ್ಯಮಿಗಳು ಕುಲಪತಿಯಾಗುವ ಅವಕಾಶಕ್ಕೆ ವಿರೋಧ..!

ಬೆಂಗಳೂರು. ರಾಷ್ಟ್ರಾದ್ಯಂತ ಚರ್ಚೆಗೆ ಕಾರಣ ವಾಗಿರುವ ವಿಶ್ವವಿದ್ಯಾಲಯ ಅನುದಾನ ಆಯೋಗ ಕರಡು 2025. ಯುಜಿಸಿ ಕರಡು-2025ರಲ್ಲಿರುವ ಕೈಗಾರಿಕಾ ಕ್ಷೇತ್ರದಲ್ಲಿ 10 ವರ್ಷ ಅನುಭವವುಳ್ಳವರು ಕುಲಪತಿ ಆಗಬಹುದು ಎಂಬ ನಿಯಮ ಸೇರಿದಂತೆ ಅನೇಕ ಶಿಕ್ಷಣ ವಿರೋಧಿ, ಜನವಿರೋಧಿ ನೀತಿಗಳಿವೆ ಎಂದು ವಿವಿಧ ಶಿಕ್ಷಣ ತಜ್ಞರು ವಿರೋಧಿಸಿದರು.

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್‌ಇಸಿ) ಶನಿವಾರ ಹಮ್ಮಿಕೊಂಡಿದ್ದ ‘ವಿಶ್ವವಿದ್ಯಾಲಯದ ಸ್ವಾಯತ್ತತೆಯನ್ನು ಹಿಂಪಡೆಯೋಣ’ ದುಂಡುಮೇಜಿನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಸಾರ್ವಜನಿಕ ಸಮಾಲೋಚನೆಗೆ ಹೊಸ ಕರಡನ್ನು ಬಿಡುಗಡೆ ಮಾಡಿದೆ. ಫೆ.5ರ ಒಳಗೆ ಸಲಹೆ, ಸೂಚನೆಗಳನ್ನು ನೀಡಲು ಅವಕಾಶ ನೀಡಿದೆ. ಈ ಕಾರಣದಿಂದ ದುಂಡುಮೇಜಿನ ಸಭೆ ಹಮ್ಮಿಕೊಳ್ಳಲಾಗಿತ್ತು.

ಕುಲಾಧಿಪತಿಗೆ ಸರ್ವ ಅಧಿಕಾರವನ್ನು ನೀಡಲಾಗಿದೆ. ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಇದರಿಂದ ಹೆಚ್ಚಿನ ಅಧಿಕಾರ ಬರುವುದು ಒಂದು ಕಡೆಯಾದರೆ, ಖಾಸಗಿ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರು ಕುಲಾಧಿಪತಿ ಆಗಿರುವುದಿಲ್ಲ. ಅದನ್ನು ನಿಯಂತ್ರಿಸುವವರೇ ಇಲ್ಲದಾಗುತ್ತದೆ ಎಂಬ ಆತಂಕವು ವ್ಯಕ್ತವಾಯಿತು.

ಪ್ರಾಧ್ಯಾಪಕರ ನೇಮಕಾತಿಗೆ ನಿಗದಿ ಪಡಿಸಿದ ಅರ್ಹತೆಗಳೂ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಒತ್ತಡದ ಭಾಗವಾಗಿವೆ. ಎನ್‌ಇಪಿಯಲ್ಲಿ ನ್ಯಾಷನಲ್‌ ಕ್ರೆಡಿಟ್ ಫ್ರೇಂವರ್ಕ್‌ ನಿಗದಿ‍ಪಡಿಸಿರುವುದು ಇದಕ್ಕೆ ಸಾಕ್ಷಿ. ಎನ್‌ಇಪಿ ಅಳವಡಿಸದ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡಿದವರಿಗೆ ಮಾನ್ಯತೆ ಇಲ್ಲದಂತೆ ಮಾಡುವ ಹುನ್ನಾರ ಇದು ಎಂದು ತಜ್ಞರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಾದೇಶಿಕ ಭಾಷೆಗೆ ಮಾನ್ಯತೆ ಇಲ್ಲ, ರಾಜ್ಯ ಸರ್ಕಾರಕ್ಕೆ ‍ಪ್ರಾತಿನಿಧ್ಯ ಇಲ್ಲ. 3000ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದರೆ ಮಾನ್ಯತೆ ಇಲ್ಲ. ಈ ಎಲ್ಲವೂ ಶಿಕ್ಷಣ ತಜ್ಞರು ರೂಪಿಸಿದ ಕರಡಿನಂತೆ ಕಾಣುತ್ತಿಲ್ಲ. ಇದು ರಾಜಕೀಯ ಕರಡು. ಶಿಕ್ಷಣ ವ್ಯವಸ್ಥೆಯನ್ನು ಪೂರ್ಣವಾಗಿ ಕೇಂದ್ರ ಸರ್ಕಾರ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮಾಡಿದ ಕರಡು ಇದು. ಇದು ಅನುಮೋದನೆಗೊಂಡು ಜಾರಿಯಾದರೆ, ಅನೇಕ ವಿಶ್ವವಿದ್ಯಾಲಯಗಳು ಮುಚ್ಚಿ ಹೋಗಲಿವೆ ಎಂದು ಎಚ್ಚರಿಸಿದರು.

ದುರ್ಬಲವರ್ಗದವರು, ಮಹಿಳೆ, ಗ್ರಾಮೀಣ, ಹಿಂದುಳಿದವರ್ಗಗಳ, ಅಂಗವಿಕಲರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಅಪ್ರಜಾತಾಂತ್ರಿಕ ಕ್ರಮದಲ್ಲಿ ಕರಡು ರೂಪಿಸಲಾಗಿದೆ. ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮಾತ್ರವಲ್ಲ ರಾಜ್ಯ ಸರ್ಕಾರ ಕೂಡ ಎಚ್ಚೆತ್ತುಕೊಂಡು ಇದರ ವಿರುದ್ಧ ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು.

ಈ ತರಹ ಅವ್ಯೈದ್ಯಾಣಿಕ್ ನಿಯಮಗಳು ಅಲ್ವಾಡಿಕೆ ಮಾಡಿದ್ರೆ ದೇಶದ ಭವಿಷ್ಯ ಸುಧಾರಿಸಲು ಕಷ್ಟ ಆಗುತ್ತೆ.!

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

9 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

12 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

12 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

12 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

12 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

12 hours ago