ಯುಜಿಸಿ 2025 ಕರಡು ಮಸೂದೆ ತಿದ್ದುಪಡಿಗೆ 6 ರಾಜ್ಯಗಳು.!

ಬೆಂಗಳೂರು.06.ಫೆ.25.:- ಯುಜಿಸಿ 2025 ಕರಡು ಅಧಿಸೂಚನೆ ಉನ್ನತ ಶಿಕ್ಷಣದ ಮೇಲೆ ರಾಜ್ಯಗಳು ಹೊಂದಿರುವ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರುದ್ಧ ಆರು ರಾಜ್ಯ ಸರ್ಕಾರಗಳು ಒಗ್ಗಟ್ಟು ಪ್ರದರ್ಶಿಸಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ರೂಪಿಸಿರುವ ಕರಡು ನಿಯಮಗಳನ್ನು ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡಿವೆ.

ಕರಡು ನಿಯಮಗಳಿಗೆ ಬಿಜೆಪಿಯೇತರ ಹಾಗೂ ಎನ್‌ಡಿಎ ಮೈತ್ರಿಕೂಟದ ‌ಮಿತ್ರ ಪಕ್ಷಗಳಾದ ಟಿಡಿಪಿ, ಜೆಡಿಯು, ಎಲ್‌ಜೆಪಿ ಸಹ ವಿರೋಧ ವ್ಯಕ್ತಪಡಿಸಿವೆ.

ಪಶ್ಚಿಮ ಬಂಗಾಳ ಸರ್ಕಾರ ತಜ್ಞರ ಸಮಿತಿ ರಚಿಸಿದೆ. ಕರಡು ನಿಯಮಗಳನ್ನೇ ಯುಜಿಸಿ ಅಧಿಕೃತಗೊಳಿಸಿದರೆ ಮುಂದಿನ ನಡೆ ಏನು ಎನ್ನುವ ಕುರಿತು ಕೇರಳ ಸಮಾವೇಶದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾನೂನು ಹೋರಾಟದ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.

ಪ್ರಮುಖ ನಿರ್ಣಯಗಳು

👉ವಿಶ್ವವಿದ್ಯಾಲಯಗಳ ಕುಲಪತಿ ನೇಮಕದಲ್ಲಿ ರಾಜ್ಯ ಸರ್ಕಾರಗಳ ಪಾತ್ರವೇ ಪ್ರಮುಖವಾಗಿರಬೇಕು

👉ಕುಲಪತಿ ಆಯ್ಕೆಗೆ ಸಮಿತಿ ರಚಿಸುವ ಅಧಿಕಾರ ಈಗ ಇರುವಂತೆಯೇ ಮುಂದುವರಿಯಬೇಕು

👉ಶೈಕ್ಷಣಿಕ ವಲಯದ ಹೊರಗಿನವರನ್ನು ಕುಲಪತಿ ಸ್ಥಾನಕ್ಕೆ ಪರಿಗಣಿಸಬಾರದು

👉ಕುಲಪತಿ ಅರ್ಹತೆಗಳು, ಅವಧಿಯ ಬದಲಾವಣೆಯಿಂದ ಶಿಕ್ಷಣದ ಗುಣಮಟ್ಟಕ್ಕೆ ಅಡ್ಡಿಯಾಗಬಾರದು

👉ಈಗಿರುವ ಶಿಕ್ಷಕರ ಕಾರ್ಯಕ್ಷಮತೆ ಮೌಲ್ಯಮಾಪನ ಮತ್ತು ಶೈಕ್ಷಣಿಕ ಸೂಚಕ (ಎಪಿಐ) ವ್ಯವಸ್ಥೆ ತೆಗೆದುಹಾಕಬಾರದು

👉ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಉಪ ನಿಮಯಗಳನ್ನು ಮರು
ಪರಿಶೀಲಿಸಬೇಕು

👉ಯುಜಿಸಿ ಮಾರ್ಗಸೂಚಿ ಅನುಸರಿಸದಿದ್ದರೆ ಕೈಗೊಳ್ಳುವ ಕ್ರಮಗಳು ಪ್ರಜಾಸತ್ತಾತ್ಮಕವಾಗಿ ಇರಬೇಕು

👉ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸಿ, ಖಾಸಗಿ ಸಂಸ್ಥೆಗಳಿಗೆ ಉತ್ತೇಜನ ನೀಡುವ ನಿಯಮಗಳನ್ನು ಕೈಬಿಡಬೇಕು

ಗೋವಿ ಸಿಝಿಯಾನ್‌, ತಮಿಳುನಾಡು ಸಚಿವಉನ್ನತ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಹಣ, ಭೂಮಿ ಕೊಡುತ್ತದೆ. ಕುಲಪತಿಗಳನ್ನು ಏಕೆ ನೇಮಕ ಮಾಡಬಾರದು?ಎಂ.ಸಿ. ಸುಧಾಕರ್‌, ಕರ್ನಾಟಕದ ಸಚಿವಅಧ್ಯಾಪಕರ ವೇತನ, ಪಿಂಚಣಿ, ಅಭಿವೃದ್ಧಿ ಸೇರಿದಂತೆ ರಾಜ್ಯಗಳು ಉನ್ನತ ಶಿಕ್ಷಣಕ್ಕೆ ದೊಡ್ಡ ಮೊತ್ತದ ಹಣ ವೆಚ್ಚ ಮಾಡುತ್ತಿವೆ.

ಆದರೆ, ನಿಯಂತ್ರಣಕ್ಕೆ ಅಧಿಕಾರ ಇಲ್ಲ ಎಂದರೆ ಹೇಗೆ? ಶ್ರೀಧರ್ ಬಾಬು, ತೆಲಂಗಾಣ ಮಾಹಿತಿ ತಂತ್ರಜ್ಞಾನ ಸಚಿವಯುಜಿಸಿ ಕರಡು ನಿಯಮಗಳು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ. ಶಿಕ್ಷಣದಲ್ಲಿ ರಾಜ್ಯಗಳ ಸ್ವಾಯತ್ತೆ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

7 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

10 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

10 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

10 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago