ಕೊಪ್ಪಳ ಜುಲೈ.25: ಯುವಕರು ಸರ್ಕಾರದ ಸ್ವಯಂ ಉದ್ಯೋಗದ ಯೋಜನೆಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಹೇಳಿದರು.
ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಹತ್ತಿರ ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕಿರು ಆಹಾರ ಉದ್ದಿಮೆಗಳ ಔಪಾಚಾರೀಕರಣ ಯೋಜನೆಯಡಿ (PMFME) ಸ್ಥಾಪಿತವಾದ ಡಿ.ಬಿ ಮಶ್ರೂಮ್ ಅವರ ಭೀಮಾ ನ್ಯಾಚುರಲ್ಸ್ನ ಅಣಬೆ ಕೃಷಿ ಘಟಕ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್. ರುದ್ರೇಶಪ್ಪ ಅವರು, ಈ ಯೋಜನೆಯಡಿ ಜಿಲ್ಲೆಯಲ್ಲಿ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿಕೊಂಡ 178 ಕ್ಕೂ ಹೆಚ್ಚು ಜನ ಫಲಾನುಭವಿಗಳಿದ್ದು, ಸ್ವಯಂ ಉದ್ಯೋಗ ಕಂಡುಕೊoಡಿದ್ದಾರೆ. ಈ ಯೋಜನೆಯು ತರಬೇತಿ, ಬ್ಯಾಂಕ್ ಸಾಲ, ಯೋಜನಾ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 15 ಲಕ್ಷಗಳ ವರೆಗೆ ಸಹಾಯಧನದ ಜೊತೆಗೆ ಪ್ಯಾಕಿಂಗ್, ಬ್ರಾö್ಯಂಡಿAಗ್ ಬಗ್ಗೆ ಮಾಹಿತಿ ನೀಡುವ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿದ್ದು, ಆಹಾರ ಸಂಸ್ಕರಣೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಇಚ್ಛಿಸುವವರು ಯೋಜನೆಯ ಲಾಭ ಪಡೆದುಕೊಳ್ಳಲು ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಅಣಬೆ ಕೃಷಿ ಮತ್ತು ಉತ್ಪನ್ನಗಳ ಘಟಕ ಸ್ಥಾಪಿಸಿದ ಭೀಮಪ್ಪ ಶಿವಪ್ಪ ಕೋರವರ ಅವರು ಮಾತನಾಡಿ, ನನ್ನ ಪದವಿಯ ನಂತರ ಜೀವನ ನಿರ್ವಹಣೆಗೆ ಉದ್ಯೋಗದ ಯೋಚನೆಯಲ್ಲಿದ್ದ ನನಗೆ ಈ ಯೋಜನೆಯ ಮಾಹಿತಿ ಸಿಕ್ಕ ತಕ್ಷಣ ಬೆಂಗಳೂರಿನ ಐಐಎಚ್‌ಆರ್ ಮತ್ತು ಮೈಸೂರಿನ ಸಿಎಫ್‌ಟಿಆರ್‌ಐ ನಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ತರಬೇತಿ ಪಡೆದುಕೊಂಡೆನು. ನಂತರ ಈ ಯೋಜನೆ ಮುಖಾಂತರ ಬ್ಯಾಂಕ್ ಸಾಲ ಮತ್ತು ಸಹಾಯಧನ ಪಡೆದುಕೊಂಡು ಅಣಬೆಯಿಂದ ಉಪ್ಪಿನಕಾಯಿ, ಬಿಸ್ಕೆಟ್ ಮತ್ತು ಪೌಡರ್ ಗಳನ್ನು ತಯಾರಿಸಿದೆ. ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ನಾನು ಮಾಸಿಕವಾಗಿ ಸುಮಾರು 30 ರಿಂದ 40 ಸಾವಿರದವರೆಗೆ ಆದಾಯ ಗಳಿಸಿ ಸ್ವಾವಲಂಬಿ ಜೀವನ ನೆಡೆಸುತ್ತಿದ್ದೇನೆ ಎಂದು ತಮ್ಮ ಅನುಭವ ಹಂಚಿಕೊoಡರು.
ಕಾರ್ಯಕ್ರಮದಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಶೇಖರ್ ಪಾಟೀಲ್, ಅಯೋಧ್ಯಾ ಕ್ರಾಪ್ಸ್ ಅಕಾಡೆಮಿ ಸಂಸ್ಥಾಪಕರಾದ ಎಮ್.ಬಿ ಪಾಟೀಲ್, ಕೃಷಿ ಇಲಾಖೆಯ ಜಿಲ್ಲಾ ಅನುಷ್ಠಾನ ಸಮಿತಿಯ ನಳಿನಿ, ಆತ್ಮ ಯೋಜನೆಯ ಶಿವಪ್ಪ ನಾಯಕ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ರಾಘವೇಂದ್ರ ಗೊಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…