ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿದ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದು, ಒಬ್ಬನ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
ಹಲ್ಲೆ ಮಾಡಿದ ಲಿಂಗಾಯತ ಸಮಾಜದವರು, ಹಲ್ಲೆಗೊಳಗಾದ ಎಸ್‌ಟಿ ಸಮಾಜದವರು ಪರಸ್ಪರ ದೂರು ದಾಖಲಿಸಿದ್ದಾರೆ.ಯುವತಿಯೊಬ್ಬಳನ್ನ ಚುಡಾಯಿಸಿದ್ದಕ್ಕೆ, ವ್ಯಕ್ತಿಯನ್ನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಅಪಹರಿಸಿ ಹಲ್ಲೆ ಮಾಡಿದ ದುಷ್ಕರ್ಮಿಗಳು
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ 39 ವರ್ಷದ ವಿಠಲ ಲಕ್ಷ್ಮಣ ನಾಯ್ಕರ್ ಎನ್ನುವ ವ್ಯಕ್ತಿಯನ್ನ ಕೆಲ ಜನರು ಬೈಕ್ ನಲ್ಲಿ ಬಂದು ಅಪಹರಣ ಮಾಡಿದ್ದಾರೆ.
ನಂತರ ಕರೆದುಕೊಂಡು ಹೋಗಿ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಗ್ಯಾಸ್ ಪೈಪ್ ಮತ್ತು ಹಗ್ಗದಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಸದ್ಯ ಕಟಕೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಇದಕ್ಕೆ ಪ್ರತಿಯಾಗಿ ಯುವತಿ ಚುಡಾಯಿಸಿದ ಬಗ್ಗೆ ಸಹ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ತಾಯಿ ಮುಂದೆಯೇ ಮಗನ ಗುದ್ದಿ ಕೊಂದ ಸ್ನೇಹಿತರು
ಕೇವಲ 500 ರೂ. ಗಾಗಿ ಇಲ್ಲೊಬ್ಬ ತನ್ನ ಸ್ನೇಹಿತನನ್ನು ಆತನ ತಾಯಿ ಸಮ್ಮುಖದಲ್ಲಿಯೇ ಕೊ*ಲೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಮೃತನನ್ನು ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ(45) ಎಂದು ಗುರುತಿಸಲಾಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಗುಜರಿ ಸಾಮಗ್ರಿ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳವಾಗಿ ಮನಸ್ತಾಪಗಳಾಗಿತ್ತು ಎನ್ನಲಾಗಿದೆ.
ಆರೋಪಿಗಳಾದ ಮಿಥುನ್ ಮತ್ತು ಮನೋಜ್ ಗೆ ಮೃತ ಹುಸೇನ್ 500ರೂ. ಕೊಡಬೇಕಿತ್ತು. ಹೀಗಾಗಿ ಹಣ ಕೇಳಲು ಹುಸೇನ್ ಮನೆಗೆ ಇಬ್ಬರೂ ಹೋಗಿದ್ದರು. ಈ ವೇಳೆ ಮೂವರ ಮಧ್ಯೆ ಗಲಾಟೆಯಾಗಿದ್ದು, ಹುಸೇನ್ ಹೊಟ್ಟೆಯ ಭಾಗಕ್ಕೆ ಕೈಯಿಂದ ಇಬ್ಬರೂ ಆರೋಪಿಗಳು ಗುದ್ದಿದ್ದಾರೆ.
ಹೊಟ್ಟೆಯ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದದ್ದರಿಂದ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳು ಹುಸೇನ್ ನನ್ನು ಕೂಡಲೇ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಹುಸೇನ್ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಬೆಳಗಾವಿ ಗ್ರಾಮೀಣ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಚ್ಚಿನಿಂದ ಹಲ್ಲೆಗೈದ ಮನೆಕೆಲಸದಾಕೆ: ಇತ್ತ ಬೆಂಗಳೂರಿನಲ್ಲಿ ಬುದ್ದಿ ಹೇಳಲು ಹೋದಾಗ ತನಗೆ ಬೈದಿದ್ದ ಯುವತಿಗೆ ಮನೆಕೆಲಸದಾಕೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಮಲ್ಲೇಶ್ವರದ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಶ್ಮಿತಾ (21) ಹಲ್ಲೆಗೊಳಗಾದ ಯುವತಿಯಾಗಿದ್ದು, ಲಲಿತಾ ಎಂಬ ಮನೆಕೆಲಸದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಸರೋಜಮ್ಮ ಎಂಬವರ ಮನೆಯಲ್ಲಿ ಲಲಿತಾ ಎಂಬ ಮಹಿಳೆ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಸರೋಜಮ್ಮ ಮನೆಗೆ ಸುಶ್ಮಿತಾ ಬಂದಿದ್ದಳು. ಈ ವೇಳೆ ಮನೆ ಕೆಲಸದಾಕೆ ಲಲಿತಾ ಜೊತೆಗೆ ಸಣ್ಣ ಸುಶ್ಮಿತಾಗೆ ಸಣ್ಣದಾಗಿ ಜಗಳವಾಗಿತ್ತು. ಸುಶ್ಮಿತಾ ಸಣ್ಣ ಹುಡುಗಿಯೆಂದು ಭಾವಿಸಿ ಬುದ್ದಿ ಹೇಳಲು ಹೋದಾಗ ಲಲಿತಾಗೆ ಬೈದಿದ್ದ ಸುಶ್ಮಿತಾ, ನೀನು ನನಗೆ ಬುದ್ದಿ ಹೇಳ್ತಿಯಾ ಎಂದು ಹೀಯಾಳಿಸಿದ್ದಳು.
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…