ಬೀದರ.16.ಜುಲೈ.25:- ಕರ್ನಾನಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯವನಿಧಿ ಯೋಜನೆಯಲ್ಲಿ ನೋಂದಣೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ ಖಾತೆ ಹೊಂದಿರಬೇಕು. ಸೇವಾ ಸಿಂಧೂ ವೆಬ್‍ಸೈಟ್ ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎ
https;//sevasindhugs.karnataka.gov.inಂಬುದನ್ನು ಪರಿಶೀಲಿಸಿಕೊಂಡು ಹಾಗೂ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ ಇಲಾಖೆಯ ಕಛೇರಿಗಳಿಗೆ ತಮ್ಮ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ಸೂಚಿಸಲಾಗಿದೆ. ಹಾಗೂ ಈಗಾಗಲೇ ನೋಂದಾಯಿಸಿಕೊಂಡ ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ಮೂರು ತಿಂಗಳಿಗೊಮ್ಮೆ 25ನೇ ತಾರೀಕಿನೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕಾಗಿರುತ್ತದೆ. ಜೂನ್, ಜುಲೈ, ಆಗಸ್ಟ್, ತಿಂಗಳಿನ 25ನೇ ದಿನಾಂಕದೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕೆಂದು ಬೀದರ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಕುಂಬಾರವಾಡಾ ಕ್ರಾಸ, ಮನ್ನಳ್ಳಿ ರೋಡ, ಬೀದರ ಅಥವಾ ಮೊಬೈಲ್ ಸಂಖ್ಯೆ: 9901563260, 8867200358 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…