ಯುವನಿಧಿ ಯೋಜನೆ: 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ

ಕೊಪ್ಪಳ.08.ಜುಲೈ .25: ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯ ಬದಲಾಗಿ ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಸೂಚಿಸಲಾಗಿದೆ.


ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ಇರುವುದಿಲ್ಲ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಚಾಲನೆಯಲ್ಲಿರುತ್ತದೆ.

ಆದಕಾರಣ 2023 ಅಥವಾ 2024ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್       ನಲ್ಲಿ ಗ್ರಾಮ ಒನ್ ಅಥವಾ ಕರ್ನಾಟಕ ಒನ್ http://sevasindhugs.karnataka.gov.in ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಎರಡು ದಿನಗಳ ನಂತರ ಡಿಡಿಪಿಐ ಇಲಾಖೆಯಲಲಿ ಎಸ್‌ಎಸ್‌ಎಲ್‌ಸಿ, ಡಿಡಿಪಿಯು ಇಲಾಖೆಯಲ್ಲಿ ಪಿಯುಸಿ ಮತ್ತು ಡಿಇಇಒ ಇಲಾಖೆಯಲ್ಲಿ ಡಿಪ್ಲೊಮಾ/ಪದವಿ ಮೂಲ ಅಂಕಪಟ್ಟಿಗಳೊoದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಬೇಕು. ಈ ಮೂರು ಇಲಾಖೆಗಳು ಜಿಲ್ಲಾಡಳಿತ ಭವನದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತವೆ.


ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ: 18005997154 ನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

56 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

1 hour ago