ಕೊಪ್ಪಳ.24.ಜುಲೈ 25: ಕೊಪ್ಪಳ ಜಿಲ್ಲೆಯಲ್ಲಿ ಏಪ್ರಿಲ್ ರಿಂದ ಜುಲೈವರೆಗೆ ಯೂರಿಯಾ ರಸಗೊಬ್ಬರದ ಬೇಡಿಕೆ 31,252 ಮೆಟ್ರಿಕ್ ಟನ್ ಆಗಿದ್ದು, ಈ ವಿರುದ್ಧ 33,459 ಮೆಟ್ರಿಕ್ ಟನ್ ರಸಗೊಬ್ಬರದ ದಾಸ್ತಾನು ಹೊಂದಲಾಗಿದೆ. ಇದರಲ್ಲಿ 28,757 ಮೆಟ್ರಿಕ್ ಟನ್ ರಸಗೊಬ್ಬರವನ್ನು ವಿತರಣೆ ಮಾಡಲಾಗಿದೆ. ಇನ್ನುಳಿದ 4,702 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ದಾಸ್ತಾನು ಲಭ್ಯವಿದೆ.
ಈ ವಾರ National Fertilizers Limited (NFL), Coromandel International Limited (CIL) ಹಾಗೂ Kribhco Fertilizer Limited ಕಡೆಯಿಂದ ಒಟ್ಟು 3,136.73 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಪೂರೈಕೆ ಮಾಡಲಾಗಿದೆ. ಈ ಪೂರೈಕೆಯಿಂದ ಕೊಪ್ಪಳ ತಾಲ್ಲೂಕಿಗೆ 629.03 ಟನ್, ಕುಷ್ಟಗಿ ತಾಲ್ಲೂಕಿಗೆ 269.95 ಟನ್, ಯಲಬುರ್ಗಾ ತಾಲ್ಲೂಕಿಗೆ 421.70 ಟನ್, ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ಭಾಗಗಳಿಗೆ 1,816.05 ಟನ್ ರಸಗೊಬ್ಬರವನ್ನು ಪೂರೈಸಲಾಗಿದೆ. ಯೂರಿಯಾ ರಸಗೊಬ್ಬರದ ಪೂರೈಕೆ ಹಂತ ಹಂತವಾಗಿ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ 5,000 ಮೆಟ್ರಿಕ್ ಟನ್ SPIC, MFL ಮತ್ತು RCF ಕಂಪನಿಗಳಿAದ ಇನ್ನೂ ಹೆಚ್ಚಿನ ಪೂರೈಕೆ ನಿರೀಕ್ಷಿಸಲಾಗಿದೆ.
ರೈತರು ಯಾವುದೇ ಆತಂಕಕ್ಕೊಳಗಾಗದೇ, ಯೂರಿಯಾ ರಸಗೊಬ್ಬರದ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸುವುದರಿಂದ ನೀರು ಮತ್ತು ಮಣ್ಣಿನ ಸಂರಕ್ಷಣೆಯೂ ಸಾಧ್ಯ. ಅಲ್ಲದೇ, ರೈತರು ರಸಗೊಬ್ಬರ ಹಾಗೂ ಇತರೆ ಕೃಷಿ ಪರಿಕರಗಳನ್ನು ಖರೀದಿಸುವಾಗ ಮಾರಾಟಗಾರರು ಖರೀದಿ ಬಿಲ್ ನೀಡದೇ ಇರುವುದು ಅಥವಾ ಮೌಲ್ಯಕ್ಕಿಂತ ಹೆಚ್ಚು ದರದಲ್ಲಿ ಮಾರಾಟ ಮಾಡುವುದನ್ನು ಕಂಡುಬoದಲ್ಲಿ, ತಕ್ಷಣವೇ ಸಹಾಯಕ ಕೃಷಿ ನಿರ್ದೇಶಕರಾದ ಜೀವನಸಾಬ, ಕೊಪ್ಪಳ: 8277922143, ನಾಗರಾಜ ಕಾತರಕಿ, ಕುಷ್ಟಗಿ: 8277922109, ಪ್ರಮೋದ ತುಂಬಾಳ, ಯಲಬುರ್ಗಾ: 8277922107, ಸಂತೋಷ ಪಟ್ಟದಕಲ್, ಗಂಗಾವತಿ: 8277922106, ಸುನೀಲ್ ಕುಮಾರ ಎಂ. ಟಿ., (ಜಾರಿದಳ) ಕೊಪ್ಪಳ: 8277932117 ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…