ಬೀದರ.22.ಜೂನ್.25:- ದಿನನಿತ್ಯ ಯೋಗ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.
ಅವರು ಶನಿವಾರ ಬೀದರ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಾಚೀನ ಕಾಲದಿಂದಲೂ ಯೋಗ ಪರಂಪರೆಯನ್ನು ಪಾಲಿಸಿಕೊಂಡು ಬಂದಿರುವ ಪೂರ್ವಜರು ಸದೃಢ ಶರೀರ ಹಾಗೂ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ಉತ್ತಮ ಆರೋಗ್ಯದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ. ಪ್ರಾಚೀನ ಕಾಲದಿಂದ ಭಾರತದಲ್ಲಿ ಪ್ರಚಲಿತವಿದ್ದ ಈ ಯೋಗ ಪರಂಪರೆಗೆ ಸುದೀರ್ಘವಾದ ಇತಿಹಾಸವಿದೆ.
ಯೋಗದಿಂದ ರೋಗ ದೂರವಾಗುತ್ತದೆ ಮತ್ತು ಯೋಗದಲ್ಲಿ ಎಲ್ಲವೂ ಇದೆ. ಶಾರೀರಿಕ, ಮಾನಸಿಕ, ಆಧ್ಯಾತ್ಮಿಕದ ಸಮನ್ವಯವಿದೆ. ಪ್ರಾಚೀನ ಕಾಲದ ಋಷಿಮುನಿಗಳು, ಸಾಧುಸಂತರು, ಯೋಗಿವರ್ಯರು ಈ ಪರಂಪರೆಗೆ ನಾಂದಿಹಾಡಿದರು. ಇಂದು ಭಾರತದ ಯೋಗ ಪರಂಪರೆ ಜಗತ್ತಿನಾದ್ಯಂತ ಹರಡುತ್ತಿರುವುದು ಭಾರತೀಯರಾದ ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ.ಶಾಂತಕುಮಾರ ಚಿದ್ರಿ, ಡಾ.ನಾಗೇಶ ಸಾವಳೆ ಯೋಗ, ಪ್ರಾಣಾಯಾಮದ ಕುರಿತಾದ ಮಾಹಿತಿ ನೀಡುತ್ತಾ ಸರ್ವರಿಗೂ ಯೋಗವಿಧಾನದಂತೆ ಆಸನಗಳನ್ನು ಮಾಡಿಸಿದರು.
ಈ ಸಂದರ್ಭದಲ್ಲಿ ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್., ಮೌಲ್ಯಮಾಪನ ಕುಲಸಚಿವರಾದ ಪ್ರೊ.ಪರಮೇಶ್ವರ ನಾಯ್ಕ.ಟಿ, ವಿಶೇಷಾಧಿಕಾರಿ ಡಾ.ರವೀಂದ್ರನಾಥ.ವಿ.ಗಬಾಡಿ ಸೇರಿದಂತೆ ಬೀದರ ವಿಶ್ವವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ.ರಾಮಚಂದ್ರ ಗಣಾಪೂರ ನಿರೂಪಿಸಿದರು.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…