ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ.


ಕೊಪ್ಪಳ.22.ಜೂನ್.25:- ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.

ಅವರು ಶನಿವಾರ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳು ಮತ್ತು ಸರ್ವಯೋಗ ಸಂಸ್ಥೆಗಳು ಇವರ ಸಹಯೋಗದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಧೈಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯೊಗವು ದೈಹಿಕ ವ್ಯಾಯಾಮ ಮಾತ್ರವಲ್ಲದೇ, ಮನಸ್ಸು ಮತ್ತು ಆತ್ಮದ ಸಮಗ್ರ ಏಕೀಕರಣ ಮಾಡುವ ಪ್ರಕ್ರಿಯೆಯಾಗಿದೆ ಎಂಬುದನ್ನು ಋಷಿ ಮುನಿಗಳು ಇಡೀ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಯೋಗಾಸನವು ನಮ್ಮ ಭಾರತ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಸೂಚಿಸುತ್ತದೆ.

ಯೋಗ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಣೆ ಮಾಡಬೇಕೆಂದು ನಮ್ಮ ದೇಶದ ಪ್ರಧಾನಮಂತ್ರಿಗಳು ಕರೆ ನೀಡಿದಾಗ, 177 ರಾಷ್ಟ್ರಗಳು ಇದಕ್ಕೆ ಒಪ್ಪಿಕೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ. ಭಾರತ ದೇಶದಲ್ಲಿ ಪರಂಪರಾಗತವಾಗಿ ಬಂದಿರುವ ಯೋಗವು ಪ್ರಸ್ತುತ ಇಡೀ ವಿಶ್ವದ ಮನ್ನಣೆಯನ್ನು ಪಡೆದಿದೆ ಎಂದರು.

ಇಂದು ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಮೊಬೈಲ್ ಮತ್ತು ವಿಶೇಷವಾಗಿ ಇಂಟರ್ನೆಟ್ ಬಳಕೆಯಿಂದಾಗಿ ಮನುಷ್ಯರು ಬಹಳಷ್ಟು ಒತ್ತಡದಲ್ಲಿರುವುದು ಸಾಮಾನ್ಯವಾಗಿದೆ. ಇದಲ್ಲದೇ ತರಗತಿ, ಟ್ಯೂಷನ್, ಹೋಮ್ ವರ್ಕ್, ಪರೀಕ್ಷೆ ಹೀಗೆ ವಿದ್ಯಾರ್ಥಿಗಳು ಸಹ ಒತ್ತಡಲ್ಲಿ ಇರುತ್ತಾರೆ. ಇಂತಹ ಒತ್ತಡ ನಿವಾರಣೆ ಶಕ್ತಿ ಯೋಗದಲ್ಲಿದ್ದು, ಇದರಿಂದ ಒತ್ತಡ ತಡೆಯುವ ಶಕ್ತಿ, ಆತ್ಮಸ್ಥೈರ್ಯ, ಮನಸ್ಥಿತಿ ಗಟ್ಟಿಯಾಗಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನದಲ್ಲಿ ದಿನಕ್ಕೆ ಕೆಲ ಸಮಯ ಯೋಗಕ್ಕೆ ಮೀಸಲಿಡುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರಿಗೂ ಯೋಗ ಬಹಳ ಮುಖ್ಯ. ಪ್ರಾಚೀನ ಸಂಸ್ಕೃತಿಗೆ ನಮ್ಮ ದೇಶದ ಕೊಡುಗೆ ಅಪಾರವಾಗಿದ್ದು, ಯೋಗವು ಭಾರತದ ಭವ್ಯ ಪರಂಪರೆಯ ಪ್ರತೀಕವಾಗಿದೆ. ಪ್ರತಿದಿನದ ಯೋಗಾಭ್ಯಾಸ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿಜಿಯವರ ಪ್ರಯತ್ನದಿಂದ ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ತಿಳಿಸಲಾಗಿದೆ. ಪ್ರತಿ ಮನೆಯಲ್ಲಿ ಅಮೃತ ಬಳ್ಳಿ ಬೆಳಸಬೇಕು ಎಂಬ ಉದ್ದೇಶದಿಂದ ಇಂದು ಆಯುಷ್ ಇಲಾಖೆಯಿಂದ ಅಮೃತ ಬಳ್ಳಿಯ ತುಂಡುಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿರುವುದು, ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಯೋಗವು ಮನುಷ್ಯರ ಬದುಕಿನಲ್ಲಿನ ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿದ್ದು, ಪ್ರತಿಯೊಬ್ಬರು ವಿಶೇಷವಾಗಿ ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ದಿನಕ್ಕೆ ಕೆಲ ಸಮಯ ಯೋಗಕ್ಕೆ ಮೀಸಲಿಡುವುದು ಅಗತ್ಯ ಎಂದು ಹೇಳಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ಬ. ಹಿರೇಗೌಡರ ಮಾತನಾಡಿ, ಮುಂಬರುವ ದಿನಗಳಲ್ಲಿ ಕೊಪ್ಪಳ ಜಿಲ್ಲೆಯ 629 ಹಳ್ಳಿಗಳಲ್ಲಿ ಯೋಗ ಪ್ರಾರಂಭಿಸಬೇಕೆoಬ ಸಂಕಲ್ಪ ಆಯುಷ್ ಇಲಾಖೆಯಿಂದ ಮಾಡಲಾಗಿದೆ. ಮುಂದಿನ ವರ್ಷದ ಯೋಗ ದಿನಾಚರಣೆಯನ್ನು ಕೊಪ್ಪಳ ಜಿಲ್ಲೆಯ ಪ್ರತಿಯೊಂದು ಹಳ್ಳಿಯಲ್ಲಿ ಪ್ರಾರಂಭಿಸಿ ಅದರ ಮೂಲಕ 14ಲಕ್ಷ ಜನರಿಗೆ ಯೋಗದಿಂದಿ ಆರೋಗ್ಯ ಪಡೆಯುವಂತೆ ಮಾಡಲಾಗುವುದು.

ಶಾಲಾ ಮಕ್ಕಳಲ್ಲಿ ಇರುವಂತಹ ಗ್ರಹಣ ಶಕ್ತಿ ಮತ್ತು ಸ್ಮರಣ ಶಕ್ತಿಯನ್ನು ಹೆಚ್ಚಿಸಲು ಹಾಗೂ ಕಲಿಕಾ ಆಸಕ್ತಿ ಹೊಂದಲು ಯೋಗದಿಂದ ಸಾಧ್ಯ. ಈ ದೃಷ್ಟಿಯಿಂದ “ಯೋಗ ಭಾರತ 365” ಎನ್ನುವ ಆನ್‌ಲೈನ್ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ ಹೋಗಿ ಯೋಗ ತರಬೇತಿಯನ್ನು ನೀಡಲು ಯೋಜನೆ ರೂಪಿಸಲಾಗಿದೆ ಎಂದರು.
ಕೊಪ್ಪಳ ಜಿಲ್ಲಾಡಳಿತ ಮತ್ತು ಎಲ್ಲಾ ಜನ ಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ನಮ್ಮ ಇಂದ್ರಕಿಲ ಪರ್ವತ ಕಲ್ಲಿನ ಗುಡ್ಡದ ಮಧ್ಯದಲ್ಲಿ ಬೀಜ ಬಿತ್ತನೆ ಕಾರ್ಯಕ್ರಮ, ಕಲ್ಲುಗಳಲ್ಲಿ ಹೋಲು ಹಾಕಿ ಕೋಕೊ ಫಿಟ್ ತುಂಬಿ ಅದರಲ್ಲಿ ಆಲ, ಬಸರಿ, ಅಶ್ವಥ್ ಈ ಮರಗಳನ್ನ ನೆಟ್ಟು, ಆ ಇಡೀ ಕಲ್ಲಿನ ಗುಡ್ಡವನ್ನು ಹಸರೀಕರಣ ಮಾಡುವ ಗುರಿ ಹೊಂದಿದ್ದು, ಇದರಿಂದ 1 ರಿಂದ 2 ಡಿಗ್ರಿ ಉಷ್ಣಾಂಶವನ್ನು ತಗ್ಗಿಸಬಹುದು ಎನ್ನುವ ಆಲೋಚನೆಯನ್ನು ಹೊಂದಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಹೇಳಿದರು.

ಆಯುಷ್ ವೈದ್ಯಾಧಿಕಾರಿ ಡಾ. ವೈ.ಜೆ. ಶಿರವಾರ ಅವರು ಯೋಗಾಭ್ಯಾಸ ನಡೆಸಿಕೊಟ್ಟರು. ಪ್ರಜಾಪಿತ ಬ್ರಹ್ಮ ಕುಮಾರಿ ವಿಶ್ವವಿದ್ಯಾಲಯದ ಯೋಗಿನಿ ಅಕ್ಕನವರು ಜ್ಞಾನ ಕಾರ್ಯಕ್ರಮ ನಡೆಸಿಕೊಟ್ಟರು.  ಅಂತರಾಷ್ಟ್ರೀಯ ಯೋಗಪಟು ಪ್ರಭಂಜನ್ ಅವರ ವಿಶೇಷ ಯೋಗ ಪ್ರದರ್ಶನ ಗಮನ ಸೆಳೆಯಿತು. ಯೋಗ ದಿನಾಚರಣೆ ಪ್ರಯುಕ್ತ ಕ್ರೀಡಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಯೋಗ ಚಾಲೆಂಜ್ ಶಿಬಿರದಲ್ಲಿ ತರಬೇತಿ ನೀಡಿದ ತರಬೇತುದಾರರಿಗೆ ಹಾಗೂ ಮತ್ತಿತರರಿಗೆ ಇದೇ ಸಂದರ್ಭದಲ್ಲಿ ಪ್ರಮಾಣಪತ್ರ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಜಿಲ್ಲಾ ಪಂಚಾಯತ ಯೋಜನಾಧಿಕಾರಿ ಪ್ರಕಾಶ ವಿ., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ್, ಜಿಲ್ಲಾ ಕ್ರೀಡಾ ಅಧಿಕಾರಿ ವಿಠ್ಠಲ್ ಬಿ.ಜಾಬಗೌಡರ, ಕೊಪ್ಪಳ ತಹಶಿಲ್ದಾರ ವಿಠ್ಠಲ್ ಚೌಗಲಾ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂಧಿಗಳು, ವಿವಿಧ ಯೋಗ ಸಂಸ್ಥೆಗಳು ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

prajaprabhat

Recent Posts

ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧ: ಸರ್ಕಾರ ಆದೇಶ

ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ  ಮುಂಜಾಗ್ರತಾ ಕ್ರಮವಾಗಿ…

1 hour ago

ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು.

ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…

1 hour ago

ಪದವಿ ಕಾಲೇಜು 310 ಪ್ರಾಂಶುಪಾಲರ ನೇಮಕಾತಿ ಶೀಘ್ರವೇ.

ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ  ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…

3 hours ago

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…

3 hours ago

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

11 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

11 hours ago