ಬೀದರ.01.ಮಾರ್ಚ.25:- ಬೀದರ ಜಿಲ್ಲೆಯಾದ್ಯಂತ ರಂಜಾನ್ ಹಾಗೂ ಹೋಳಿ ಹಬ್ಬಗಳನ್ನು ಶಾಂತಿಯುತವಾಗಿ ಸಹೋದರತ್ವ ಭಾವನೆಯಿಂದ ಕೋಮು ಸೌಹಾರ್ದತೆಗೆ ಯಾವುದೇ ರೀತಿಯಲ್ಲಿ ಧಕ್ಕೆ ಬಾರದಂತೆ ಆಚರಿಸುವಂತೆ ಬೀದರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ ಇಂದಿಲ್ಲಿ ಕರೆ ನೀಡಿದರು.
ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಂದು ಈ ಕುರಿತು ವಿವಿಧ ಸಮುದಾಯಗಳ ಗಣ್ಯರ ನಾಯಕರ ಸಭೆಯನ್ನುದ್ದೇಶಿಸುತ್ತಾ ಅವರು ಮಾತನಾಡಿದರು.
ಹೋಳಿ ಹಬ್ಬದ ದಿನದಂದು ಮಧ್ಯಾಹ್ನ 12:30 ಗಂಟೆಯವರೆಗೆ ಎಲ್ಲರೂ ಬಣ್ಣದಾಟವನ್ನು ಮುಗಿಸಬೇಕು.
ಈ ಸಂದರ್ಭದಲ್ಲಿ ಯಾವುದೇ ವ್ಯಕ್ತಿಗಳಿಗೆ ಬಣ್ಣದಿಂದ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅದೇ ರೀತಿ ರಂಜಾನ್ ಹಬ್ಬದ ಪ್ರಯುಕ್ತ ಓಲ್ಡ್ ಸಿಟಿಯಲ್ಲಿ ವ್ಯಾಪಾರ ಮಾಡಲು ವ್ಯಾಪರಸ್ಥರಿಗೆ ಮೊದಲನೆ ಹತ್ತು ದಿನ ರಾತ್ರಿ 1 ಗಂಟೆಯವರೆಗೆ, ಎರಡನೇ ಹತ್ತು 10 ದಿನ ರಾತ್ರಿ 1 ಗಂಟೆಯವರೆಗೆ, ಮೂರನೆ ಹತ್ತು ದಿನ ಬೆಳಗ್ಗಿನವರೆಗೆ ಸಮಯವಕಾಶ ಕಲ್ಪಿಸಿ ವ್ಯಾಪರಸ್ಥರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ನಗರಸಭೆ ಅಧ್ಯಕ್ಷರಾದ ಎಂ.ಡಿ.ಗೌಸ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಕೂಡ ಹಿಂದು-ಮುಸ್ಲಿಂ ಬಾಂಧವರು ಪ್ರೀತಿ, ಭಾಂದವ್ಯದಿಂದ ಆಚರಿಸುತ್ತಾ ಬಂದಿದ್ದೇವೆ. ಯಾವುದೇ ರೀತಿ ಅಹಿತಕರ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಹಿಂದು-ಮುಸ್ಲಿಂ ಸಮುದಾಯದ ಮುಖಂಡರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಭೆಯಲ್ಲಿ ನಗರಸಭೆ ಸದಸ್ಯರಾದ ಇರ್ಶಾದ ಪೈಲ್ವಾನ, ಅಬ್ದುಲ್ ಅಜೀಜ್ ಮುನ್ನಾ, ಡಾ.ಮಕಸೂದ ಚಂದಾ, ಶಾಹಿನ ಪವೇಜ್, ಎಂ.ಕೆ.ಬೇಗ, ನಂದಕಿಶೋರ ಶಮಾ, ಸೂರ್ಯಕಾಂತ ಶೆಟಕಾರ, ಮನೋಹರ ದಂಡೆ, ಡಿ.ವೈ.ಎಸ್.ಪಿ. ಶಿವನಗೌಡ ಪಾಟೀಲ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ವಿವಿಧ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…