ರಾಜ್ಯದಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಮೀಸಲು ಕಡ್ಡಾಯ.!

ಹೊಸಪೇಟೆ.13.ಫೆ.25:- ವಿಜಯನಗರ ಜಿಲ್ಲೆಯಲ್ಲಿ ಅಂಗವಿಕಲ/ವಿಕಲಚೇತನ ವಿದ್ಯಾರ್ಥಿಗಳಿಗೆ ರಾಜ್ಯದ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆಗಳಿಲ್ಲದೆ ನೇರವಾಗಿ ಪ್ರವೇಶ ಕಲ್ಪಿಸಿ ಪಿಯುಸಿವರೆಗೆ ಉಚಿತ ಶಿಕ್ಷಣದ ಅವಕಾಶವನ್ನು ರಾಜ್ಯ ಸರ್ಕಾರ ನೀಡಿರುವುದು ದೇಶಕ್ಕೆ ಮಾದರಿಯಾಗಿದೆ’ ಎಂದು ರಾಜ್ಯ ಅಂಗವಿಕಲರ ಅಧಿನಿಯಮ ಅನುಷ್ಠಾನ ಆಯೋಗದ ಆಯುಕ್ತ ದಾಸ್ ಸೂರ್ಯವಂಶಿ ಅವರು ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಏರ್ಪಡಿಸಿದ್ದ ಅಂಗವಿಕಲ ವ್ಯಕ್ತಿಗಳ ಅಧಿನಿಯಮ 2016ರ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಅಧೀನದಲ್ಲಿರುವ ಸುಮಾರು 900 ವಸತಿ ಶಾಲೆಗಳಲ್ಲಿ ಶೇ 25 ಅಂಗವಿಕಲತೆ ಹೊಂದಿದ ಮಕ್ಕಳಿಗೆ ಯಾವುದೇ ಪ್ರವೇಶಾತಿ ಪರೀಕ್ಷೆಗಳಿಲ್ಲದೇ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲು ಅವಕಾಶವಿದೆ’ ಎಂದರು.

ಶಾಲಾ ಶಿಕ್ಷಣ ಇಲಾಖೆ ಅಂಧ ಮತ್ತು ಕಿವುಡ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗದಿರಲು ಹಾಗೂ ಬ್ರೈಲ್ ಲಿಪಿ ಅಳವಡಿಸಿ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ. ಬ್ರೈಲ್ ಲಿಪಿ ಕಲಿತ ಅಂಧರು ಸುಮಾರು 12 ಜನ ಐಎಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶಿಕ್ಷಣ ಪಡೆಯುವ ಮೀಸಲಾತಿ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಅಂಗವಿಕಲರಿಗಾಗಿಯೇ ಇರುವ ಶೇ4ರಿಂದ 5ರಷ್ಟು ಮೀಸಲಾತಿ ಇದ್ದು, ಅದರ ಪರಿಶೀಲನೆಗಾಗಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

‘ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿಕಲಚೇತನರ ಸ್ನೇಹಿ ವಾತಾವಾರಣ ಸೃಷ್ಟಿಸಬೇಕಿದೆ. ಆಯಾ ಸ್ಥಳಗಳಲ್ಲಿ ಅಂಗವಿಕಲರ ಓಡಾಟಕ್ಕೆ ಸುಲಭ ದಾರಿ, ವೀಲ್‌ಚೇರ್ ವ್ಯವಸ್ಥೆ, ಶೌಚಾಲಯ ಸೇರಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು.

ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ವಿಶೇಷ ಚೇತನರ ಆರೈಕೆದಾರರರಿಗೆ ಮಾಸಾಶನ ನೀಡಲು ಕ್ರಮ ವಹಿಸಲಾಗಿದ್ದು, ಇದೇ ಏಪ್ರಿಲ್ ತಿಂಗಳಿಂದ ಆರಂಭಿಸಲು ಚಿಂತನೆ ನಡೆಸಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಇತರರು ಇದ್ದರು.

Quote – ವಿಜಯನಗರ ಜಿಲ್ಲೆಯಲ್ಲಿ ಅಂಗವಿಕಲರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಇದರಿಂದಾಗಿ ಇಡೀ ರಾಜ್ಯಕ್ಕೆ ವಿಜಯನಗರ ಜಿಲ್ಲೆ ಮಾದರಿಯಾಗಿದೆ ದಾಸ್ ಸೂರ್ಯವಂಶಿ ಆಯುಕ್ತರು ಅಂಗವಿಕಲರ ಅಧಿನಿಯಮ ಅನುಷ್ಠಾನ ಆಯೋಗ

Cut-off box – ‘ದೇಶಕ್ಕೆ ಮಾದರಿಯಾದ ರಾಜ್ಯ’ ರಾಜ್ಯದಲ್ಲಿ 7 ಸಾವಿರ ಅಂಗವಿಕಲರು ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಯುಆರ್‌ಡಬ್ಲೂ ಎಆರ್‌ಡಬ್ಲೂ ಎಂಆರ್‌ಡಬ್ಲೂಗಳಾಗಿ ನೇಮಕ ಮಾಡಿ ಸರ್ಕಾರಿ ಸೇವೆಗಳನ್ನು ಪಡೆಯಲು ಅನುಕೂಲ ಕಲ್ಪಿಸಲಾಗಿದೆ. ದೇಶದಲ್ಲೇ ಕರ್ನಾಟಕ ರಾಜ್ಯ ಅಂಗವಿಕಲರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಮಾದರಿಯಾಗಿದೆ.

ರಾಷ್ಟ್ರೀಯ ಅಂಗವಿಕಲರ ಅಭಿವೃದ್ಧಿ ಹಣಕಾಸು ಸಂಸ್ಥೆಯ ಮೂಲಕ ಪ್ರತಿ ವರ್ಷ ರಾಜ್ಯಕ್ಕೆ ₹ 100 ಕೋಟಿ ಅನುದಾನ ತರಬಹುದಾಗಿದ್ದು ಅಂಗವಿಕಲರಿಗೆ 50 ಲಕ್ಷದವರೆಗೆ ಸಾಲಸೌಲಭ್ಯ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ ಎಂದು ದಾಸ್ ಸೂರ್ಯವಂಶಿ ಹೇಳಿದರು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

3 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

3 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

3 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

3 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

3 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

4 hours ago