ಬೆಂಗಳೂರು.31.ಮೇ.25:- ಎಲ್ಲಾ ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಕೋವಿಡ್ ಪತ್ತೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಕೇಸ್ ನಿಯಂತ್ರಣ, ಪತ್ತೆಗೆ ಕ್ರಮ ವಹಿಸಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಕೋವಿಡ್ ಪರೀಕ್ಷೆಯ ನೋಡಲ್ ಅಧಿಕಾರಿ ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ರ ಪರೀಕ್ಷೆಯನ್ನು ಎಲ್ಲಾ SARI ಪ್ರಕರಣಗಳಲ್ಲಿ ಹಾಗೂ ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಮಾತ್ರ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು RT-PCR ಪರೀಕ್ಷೆಗಾಗಿ ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು.
ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First-In – First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.
ಎಲ್ಲಾ SARI ಪಕರಣಗಳಿಗೆ ಕಡ್ಡಾಯವಾಗಿ ಕೋವಿಡ್-19 ರ ಪರೀಕ್ಷೆ ನಡೆಸುವುದು.
ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಕೋವಿಡ್-19 ರ ಪರೀಕ್ಷೆಗಳನ್ನು ನಡೆಸುವುದು.
ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು ಅಂತ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…