ರಾಜ್ಯದಲ್ಲಿ ಒಳಮೀಸಲಾತಿ ವರದಿ ಬಳಿಕ 19,000 ಶಿಕ್ಷಕರ ನೇಮಕಾತಿ.!
ಬೆಂಗಳೂರು.03.ಮೇ .25:- : ರಾಜ್ಯದಲ್ಲಿ ಒಳಮೀಸಲಾತಿ ಬಳಿಕ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಿಕ್ಶಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅಧ್ಯಯನ ಸಂಬಂಧ ರಚಿಸಿರುವ ನಿವೃತ್ತ ನ್ಯಾ.ನಾಗಮೋಹನ್ ದಾಸ್ ಸಮಿತಿಯು ವರದಿ ಸಲ್ಲಿಸಿದ ಬಳಿಕ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದರು.
ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ. ನಾಗಮೋಹನದಾಸ್ ಸಮಿತಿ ವರದಿ ಬಂದ ಬಳಿಕ ಈ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

