Home » ಲೈವ್ ನ್ಯೂಸ್ » ರಾಜ್ಯದಲ್ಲಿ ಕೆಪಿಎಸ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ. ಸಚಿವರು ಮಧು ಬಂಗಾರಪ್ಪಾ!

ರಾಜ್ಯದಲ್ಲಿ ಕೆಪಿಎಸ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ. ಸಚಿವರು ಮಧು ಬಂಗಾರಪ್ಪಾ!

ಬೆಂಗಳೂರು.01.ಸೆಪ್ಟೆಂಬರ್.26: ರಾಜ್ಯದಲ್ಲಿ (KPS) ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಮೂಲಕ ಪೂರ್ವ ಪ್ರಾಥಮಿಕದಿಂದ ಪಿಯುಸಿ ವರೆಗೆ ಒಂದೇ ಸೂರಿನಡಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸಾಲ ನೀಡಲು ಮುಂದೆ ಬಂದಿದೆ. ಇದರ ಜೊತೆಗೆ ಎಜಾಕ್ ಸಂಸ್ಥೆಯು ಪ್ರತಿ ಜಿಲ್ಲೆಯಲ್ಲಿ ಸುಮಾರು ₹14 ಕೋಟಿ ವೆಚ್ಚದಲ್ಲಿ ತಲಾ ಒಂದು ಕೆಪಿಎಸ್ ಶಾಲೆ ನಿರ್ಮಿಸಲು ಮುಂದೆ ಬಂದಿದೆ. ಈಗಾಗಲೇ ಶಿವಮೊಗ್ಗ ನಗರದಲ್ಲಿ ಕೆಪಿಎಸ್ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಸಚಿವರು ಮಧು ಬಂಗಾರಪ್ಪಾ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಂಥಾಲಯ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಗ್ರಂಥಪಾಲಕರನ್ನು ಸಚಿವರು ಸನ್ಮಾನಿಸಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಗ್ರಂಥಾಲಯ ಇಲಾಖೆಯ ಸಿಬ್ಬಂದಿಯ ಮಕ್ಕಳನ್ನೂ ಸನ್ಮಾನಿಸಲಾಯಿತು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ. ರಾಜಪ್ಪ ದಳವಾಯಿ ಅವರು ‘ಪುಸ್ತಕ ಸಂಸ್ಕೃತಿ’ ಕುರಿತು ಉಪನ್ಯಾಸ ನೀಡಿದರು. ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಗ್ರಂಥಪಾಲಕ ಡಾ. ಸಿ.ಪಿ. ರಾಮಶೇಷ ಅವರು ‘ಗ್ರಂಥಪಾಲಕರ ದಿನಾಚರಣೆ’ ಕುರಿತು ಉಪನ್ಯಾಸ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಿ. ರಶ್ಮಿ ಮಹೇಶ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತೆ ಶ್ರೀಮತಿ ವಿದ್ಯಾಕುಮಾರಿ ಕೆ., ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology