ಬೆಂಗಳೂರು.25.ಮೇ.25:- ಕೋವಿಡ್ -19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR & RAT ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಿಗೆ ಕೋವಿಡ್ ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವುದು.
ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First In First Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.
ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು.
ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ…
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…