ರಾಜ್ಯದಲ್ಲಿ ನಕಲಿ ಪಿಎಚ್‍ಡಿ ಹಾವಳಿ. ಅಭ್ಯರ್ಥಿಗಳ ದಾಖಲೆ ಪರಿಶೀಲಿಸಿ: ಸಚಿನ ಕುಮಾರ ನಾಯಕ.!

ಸುರಪುರ:22.ಜನವರಿ.25:- ರಾಜ್ಯದಲ್ಲಿ ನಕಲಿ ಪಿಎಚ್‍ಡಿ ಹಾವಳಿ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪದವಿ ಮತ್ತು ಸ್ನಾತಕೋತ್ತರ  ಪದವಿ, M.Phil ಮತ್ತು ಪಿಎಚ್‍ಡಿ ವ್ಯಾಪಾರೀಕರಣವಾಗುತ್ತಿದೆ. ಕೆಲವ ಜನ ಹೈ ಕಲರ ರ್ಪ್ರಿಂಟ್ ತಂದಿದ್ದಾರೆ  ಹಾಗೂ ಕೆಲವ ಜನ ₹ 4 ರಿಂದ 5 ಲಕ್ಷ ಹಣ ನೀಡಿ ಕೇವಲ 6 ತಿಂಗಳಲ್ಲಿ ಪಿಎಚ್‍ಡಿ ಪಡೆದು ಅತಿಥಿ ಉಪನ್ಯಾಸಕರಾಗಿ ಕೆಲ ಆಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಾರೆ. ಇದರಿಂದ ನಿಜವಾದ ಅಭ್ಯರ್ಥಿಗಳಿಗೆ ಮೋಸವಾಗುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸಚಿನ್‍ಕುಮಾರ ನಾಯಕ ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಬರೆದ ಮನವಿಯನ್ನು ನಗರದ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆನಂದಕುಮಾರ ಜೋಷಿ ಅವರಿಗೆ ಮಂಗಳವಾರ ಸಲ್ಲಿಸಿ ಅವರು ಮಾತನಾಡಿದರು.

‘ಪಿಎಚ್‍ಡಿಯ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಬೇಕು. ಅಧಿಸೂಚನೆಯ ದಿನಾಂಕ, ಪ್ರವೇಶಾತಿ ರಶೀದಿ, ಹಾಜರಾತಿಯ ದಿನಗಳ ಪ್ರತಿ, ಸಂಶೋಧನೆಯ ನಕಲು ಪ್ರತಿ, ನೋಂದಣಿ ನಕಲು ಪ್ರತಿ, ಪ್ರಬಂಧ ಪರಿಶೀಲನೆ, ಘಟಿಕೋತ್ಸವದ ಭಾವಚಿತ್ರಗಳು, ಪ್ರತಿ 6 ತಿಂಗಳಿಗೊಮ್ಮೆ ನೀಡುವ ಪ್ರಗತಿಯ ವರದಿ, ಸಂಶೋಧನೆಗೆ ಹಾಜರಾದ ಸಿಸಿಟಿವಿ ಕ್ಯಾಮೆರಾ ಫೂಟೇಜ್ ಇತರ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಬೇಕು’ ಎಂದು ಆಗ್ರಹಿಸಿದರು.

‘ಖೊಟ್ಟಿ ಪಿಎಚ್‍ಡಿ ಪ್ರಮಾಣ ಪತ್ರ ನೀಡುವ ಅಭ್ಯರ್ಥಿಗಳ ಅರ್ಜಿಯನ್ನು ಪರಿಗಣಿಸಬಾರದು. ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು. ಇದೇ ಪರಿಸ್ಥಿತಿ ಮುಂದುವರಿದರೆ ಹೋರಾಟ ಮಾಡಲಾಗುವುದು. ಲೋಕಾಯುಕ್ತರಿಗೂ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತರಾದ ಗುರುನಾಥರೆಡ್ಡಿ ಶೀಲವಂತ, ತಪ್ಪಣ್ಣ ಪಾಟೀಲ, ಕಲ್ಯಾಣರಾವ ಕೋಠಿಖಾನಿ ಇತರರು ಉಪಸ್ಥಿತರಿದ್ದರು.

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

39 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

47 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago